ವಿವೇಕಾನಂದರ ಆದರ್ಶ ಯುವಕರಿಗೆ ದಾರಿದೀಪ'
ಶಿವಮೊಗ್ಗ: ಸ್ವಾಮಿ ವಿವೇಕಾನಂದರ ಜೀವನ ಮೌಲ್ಯ ಆದರ್ಶಗಳು ಇಂದಿನ ಯುವಜನಾಂಗಕ್ಕೆ ದಾರಿದೀಪವಾಗಿದೆ. ಯುವಜನಾಂಗಕ್ಕೆ ಏಳಿ ಏದ್ದೇಳಿ ಗುರಿಮುಟ್ಟುವತನಕ ನಿಲ್ಲದಿರಿ ಎಂಬ ಸಂದೇಶಗಳು ನೀಡಿ ಯುವಕರಲ್ಲಿ ಆತ್ಮವಿಶ್ವಾಸ ಧೈರ್ಯ ಸಾಹಸದ ಮನೋಭಾವವನ್ನು ಬೆಳೆಯುವಂತೆ ಮಾಡಿದ ಆದರ್ಶ ವ್ಯಕ್ತಿ ಸ್ವಾಮಿ ವಿವೇಕಾನಂದರು ಎಂದು ಸ್ವಾತಂತ್ರ್ಯ ಹೋರಾಟಗಾರ ಕೆ. ದೇವೇಂದ್ರಪ್ಪ ಹೇಳಿದರು.
ಹೊಸಮನೆಯ ಪತಂಜಲಿ ಯೋಗಕಲಾವುಂದಿರದಲ್ಲಿ ಜಿಲ್ಲಾಡಳಿತ, ಜಿ.ಪಂ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಪತಂಜಲಿ ಯೋಗ ಮತ್ತು ಪ್ರಕೃತಿ ಸಂಸ್ಥೆ, ಪತಂಜಲಿ ಸ್ವಾಮಿ ವಿವೇಕಾನಂದರ ಅಧ್ಯಯನ ಕೇಂದ್ರ, ಪತಂಜಲಿ ಯುವಕ ಮಂಡಳಿ, ಪತಂಜಲಿ ಯುವತಿ ಮಂಡಳಿ, ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಿದ ರಾಷ್ಟ್ರೀಯ ಯುವ ಸಪ್ತಾಹ ಸ್ವಾಮಿ ವಿವೇಕಾನಂದ ಜಯಂತ್ಯೋತ್ಸವ ಉದ್ಘಾಟಿಸಿ ಅವರು ಮಾತನಾಡಿದರು.