21ರಂದು ಅಂಬಿಗರ ಚೌಡಯ್ಯ ಜಯಂತಿ
ಶಿವಮೊಗ್ಗ: ಸರ್ಕಾರದ ವಿವಿಧ ಇಲಾಖೆ ಸೇರಿ ಜ. 21ರಂದು ಬೆಳಗ್ಗೆ 11 ಗಂಟೆಗೆ ಕುವೆಂಪು ರಂಗಮಂದಿರದಲ್ಲಿ ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಏರ್ಪಡಿಸಿದೆ. ವಿಧಾನ ಪರಿಷತ್ ಸಭಾಪತಿ ಡಿ.ಎಚ್. ಶಂಕರಮೂರ್ತಿ ಹಾಗೂ ವಿಧಾನಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ ಅವರ ಉಪಸ್ಥಿತಿಯಲ್ಲಿ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ಕಾರ್ಯಕ್ರಮ ಉದ್ಘಾಟಿಸುವರು. ಶಾಸಕರಾದ ಪ್ರಸನ್ನಕುಮಾರ್ ಅಧ್ಯಕ್ಷತೆ ವಹಿಸುವರು. ಸಂಸದ ರಾಘವೇಂದ್ರ ಮೆರವಣಿಗೆಗೆ ಚಾಲನೆ ನೀಡುವರು. ರಾಜ್ಯಸಭಾ ಸದಸ್ಯ ಆಯನೂರು ಮಂಜುನಾಥ ನಿಜಶರಣ ಅಂಬಿಗರ ಚೌಡಯ್ಯನವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡುವರು. ಜಿಲ್ಲಾ ಗಂಗಾ ಮತಸ್ಥರ ಸಮಾಜದ ಅಧ್ಯಕ್ಷ ಕೆಂಚಪ್ಪ, ಜಿಲ್ಲಾ ಮೊಗವೀರರ ಮಹಾಜನ ಸಮಾಜದ ಅಧ್ಯಕ್ಷ ಬಿ.ಎಂ. ಮಹಾಬಲರಾವ್ ಹಾಗೂ ಗಣ್ಯರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಬೆಳಗ್ಗೆ 9 ಗಂಟೆಗೆ ನಗರದ ಸೈನ್ಸ್ ಮೈದಾನದಿಂದ ನಿಜಶರಣ ಅಂಬಿಗರ ಚೌಡಯ್ಯನವರ ಭಾವಚಿತ್ರದೊಂದಿಗೆ ವಿವಿಧ ಜಾನಪದ ಕಲಾತಂಡಗಳು, ಜನಪ್ರತಿನಿಧಿಗಳು, ವಿದ್ಯಾರ್ಥಿಗಳು, ಸಾಹಿತಿಗಳು, ಕಲಾವಿದರು,ನೌಕರರೊಂದಿಗೆ ಮೆರವಣಿಗೆಯು ಸಂಚರಿಸಿ, ಕುವೆಂಪು ರಂಗಮಂದಿರ ತಲುಪುವುದು.