ಗ್ರಾಮೀಣ ಕ್ರೀಡಾಕೂಟ ಉದ್ಘಾಟನೆ
ಜೋಗ್ಫಾಲ್ಸ್: ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಗ್ರಾಮಾಭಿವೃದ್ಧಿ ಯೋಜನೆ ಮೂಲಕ ವಿವಿಧ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ಗ್ರಾಮೀಣರು ಸದಾ ಒಂದಿಲ್ಲೊಂದು ಚಟುವಟಿಕೆಗಳಿಂದ ಕ್ರಿಯಾಶೀಲರಾಗಿರುವಂತೆ ಮಾಡಲು ಗ್ರಾಮೀಣ ಕ್ರೀಡೆಗಳನ್ನು ಏರ್ಪಡಿಸಲಾಗಿದೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಳಗುಪ್ಪ ವಲಯದ ಮೇಲ್ವಿಚಾರಕ ಪ್ರಶಾಂತ್ ಎಸ್. ಹೇಳಿದರು.
ಕಾರ್ಗಲ್ನ ಕುವೆಂಪು ಕ್ರೀಡಾಂಗಣದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಆಶ್ರಯದಲ್ಲಿ ನಡೆದ ಕಾರ್ಗಲ್ ಕಾರ್ಯಕ್ಷೇತ್ರದ ಗ್ರಾಮೀಣ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು.
ಕಾರ್ಗಲ್ ಒಕ್ಕೂಟದ ಅಧ್ಯಕ್ಷೆ ನಾಗರತ್ನ ಮಾತನಾಡಿ, ಸ್ಪರ್ಧೆಗಳಲ್ಲಿ ಸೋಲು-ಗೆಲವು ಮುಖ್ಯವಲ್ಲ. ಭಾಗವಹಿಸುವಿಕೆ ಮುಖ್ಯ. ಕ್ರೀಡಾ ಮನೋಭಾವದಿಂದ ಭಾಗವಹಿಸುವ ಮೂಲಕ ಕ್ರೀಡಾಕೂಟದ ಯಶಸ್ಸಿಗೆ ಶ್ರಮಿಸುವಂತೆ ತಿಳಿಸಿದರುಕಾರ್ಗಲ್ ಬಿ ಒಕ್ಕೂಟದ ಅಧ್ಯಕ್ಷ ನಾಗರಾಜ್, ಶಾರದಾ ಮಹಿಳಾ ಸಮಾಜದ ಅಧ್ಯಕ್ಷೆ ಲಕ್ಷ್ಮೀರಾಜು, ಜೋಗ್ ಒಕ್ಕೂಟದ ಅಧ್ಯಕ್ಷೆ ಪಾರ್ವತಿ ಉಪಸ್ಥಿತರಿದ್ದರು. ಸುಜಾತಾ ಪ್ರಾರ್ಥಿಸಿದರು. ಸುಮಾ ಸ್ವಾಗತಿಸಿದರು. ಕಾಮಾಕ್ಷಿ ವಂದಿಸಿದರು.