ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ಪ್ರತಿಭೆ ಹೊರಹಾಕಲು 'ಚಿಗುರು' ಸಹಕಾರಿ

Rashmi Kasaragodu
Updated On : 19 Jan 2014, 11:35 am

ಕನ್ನಡಪ್ರಭ ವಾರ್ತೆ ಟಿ ಶಿವಮೊಗ್ಗ ಟಿ ಜ.17
ಪ್ರತಿನಿತ್ಯ ಮಕ್ಕಳ ವಿದ್ಯಾಭ್ಯಾಸದ ಯಾಂತ್ರಿಕ ಜೀವನದಲ್ಲಿ ಒಂದಿಷ್ಟು ಮನರಂಜನೆ ಹಾಗೂ ಅವರಲ್ಲಿ ಅಡಗಿರುವ ಸೂಪ್ತ ಪ್ರತಿಭೆ ಹೊರ ಹಾಕಲು ಚಿಗುರು ಕಾರ್ಯಕ್ರಮ ಒಳ್ಳೆಯ ವೇದಿಕೆ ಎಂದು ನಗರಪಾಲಿಕೆ ಸದಸ್ಯ ಸದಸ್ಯ ನಾಗರಾಜ್ ಜಂಕಾರಿ ತಿಳಿಸಿದರು.
ರಾಜೇಂದ್ರ ನಗರದ ರೋಟರಿ ಸಭಾಂಗಣದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ರೋಟರಿ ಶಿವಮೊಗ್ಗ ಪೂರ್ವ ಹಾಗೂ ರೋಟರಿ ವಿದ್ಯಾಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಚಿಗುರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಮಕ್ಕಳು ವಿದ್ಯಾಭ್ಯಾಸದ ಜತೆಗೆ ಸಾಂಸ್ಕೃತಿಕ ಚಟುವಟಿಕೆಯಲ್ಲಿ ತೊಡಗಿಸಿಕೊಂಡಾಗ ಒತ್ತಡದಿಂದ ಹೊರಬರಲು ಸಾಧ್ಯ ಹಾಗೂ ಅವರ ಮುಂದಿನ ಭವಿಷ್ಯಕ್ಕೆ ದಾರಿದೀಪವಾಗಿದೆ ಎಂದರು.
ರೋಟರಿ ಪೂರ್ವ ವಿದ್ಯಾಸಂಸ್ಥೆಯ ಅಧ್ಯಕ್ಷ ಜಿ.ವಿಜಯಕುಮಾರ್ ಮಾತನಾಡಿ, ಸಾಂಸ್ಕೃತಿಕ ಕಾರ್ಯಕ್ರಮಗಳು ಮಕ್ಕಳಿಗೆ ಅವಶ್ಯಕ. ಇಂತಹ ಚಿಕ್ಕ ವೇದಿಕೆಗಳು ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳ ಕಲಾ ಜೀವನದಲ್ಲಿ ಬೆಳಕು ಚೆಲ್ಲಲು ಸಹಕಾರಿ ಎಂದರು.
ರೋಟರಿ ಪೂರ್ವ ಅಧ್ಯಕ್ಷ ಕೆ.ಎಸ್.ಪುರುಷೋತ್ತಮ್, ಕಾರ್ಯದರ್ಶಿ ಎಂ.ಎಲ್. ಪ್ರತಾಪ್, ಬಿ.ಪ್ರಸನ್ನಕುಮಾರ್ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಶಾಲಾ ಮಕ್ಕಳಿಂದ ಸಮೂಹ ನೃತ್ಯ ಕಾರ್ಯಕ್ರಮ ನೆರವೇರಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement