ಸಂಚಾರ ನಿಯಮ ಪಾಲಿಸಿ: ಡಿವೈಎಸ್ಪಿ ಸುರೇಶ್
ಸಾಗರ: ನಿರ್ಲಕ್ಷ್ಯದ ಚಾಲನೆಯೆ ಅಪಘಾತ ಸಂಭವಿಸಲು ಕಾರಣವಾಗಿದ್ದು, ಯುವಜನರು ಹೆಚ್ಚು ಜವಾಬ್ದಾರಿಯಿಂದ ವಾಹನ ಚಾಲನೆ ಮಾಡಬೇಕು ಎಂದು ಡಿವೈಎಸ್ಪಿ ಬಿ.ವಿ.ಸುರೇಶ್ ಹೇಳಿದರು.
ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಂಗಳವಾರ ಉಪವಿಭಾಗ ಪೊಲೀಸ್ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ 25ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಪೇಟೆ ಠಾಣೆ ಸರ್ಕಲ್ ಇನ್ಸ್‌ಪೆಕ್ಟರ್ ಕೃಷ್ಣಮೂರ್ತಿ ಮಾತನಾಡಿ, ಮೊಬೈಲ್‌ನಲ್ಲಿ ಮಾತನಾಡುತ್ತಾ ವಾಹನ ಚಾಲನೆ ಮಾಡಿದರೆ ಅಪಾಯ ಕಟ್ಟಿಟ್ಟ ಬುತ್ತಿ ಎಂದರು.
ಗ್ರಾಮಾಂತರ ಠಾಣೆ ಸರ್ಕಲ್ ಇನ್ಸ್‌ಪೆಕ್ಟರ್ ಎಚ್.ಎನ್.ಹೊನ್ನಪ್ಪ, ಪ್ರತಿ ವರ್ಷ ಇಲಾಖೆ ವತಿಯಿಂದ ರಸ್ತೆ ಸುರಕ್ಷತೆ ಬಗ್ಗೆ ಜಾಗೃತಿ ಮೂಡಿಸುತ್ತಿದ್ದರೂ ಅಪಘಾತದ ಸಂಖ್ಯೆ ಕಡಿಮೆಯಾಗುತ್ತಿಲ್ಲ. ಯುವಜನರು ಇಲಾಖೆಯ ಸೂಚನೆಯನ್ನು ಗಂಭೀರವಾಗಿ ಪರಿಗಣಿಸಿ, ಅಪಘಾತದ ಸಂಖ್ಯೆಯನ್ನು ಕಡಿಮೆಗೊಳಿಸುವತ್ತ ಗಮನ ಹರಿಸಬೇಕು ಎಂದು ಸಲಹೆ ಮಾಡಿದರು.
ಕಾಲೇಜಿನ ಪ್ರಾಚಾರ್ಯ ಡಾ.ಪ್ರಸನ್ನ ಅಧ್ಯಕ್ಷತೆ ವಹಿಸಿದ್ದರು. ಕಾಲೇಜು ಅಭಿವೃದ್ದಿ ಸಮಿತಿಯ ಕಮಲಾಕರ, ಗಣಪತಿ ಸುಳಗೋಡು, ಗೀತಾ ದಳವಾಯಿ, ಮಹ್ಮದ್ ಹಾಜರಿದ್ದರು.