ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

'ನಿಷ್ಪಕ್ಷಪಾತ ಚುನಾವಣೆಗೆ ಮತದಾರರು ಸಹಕರಿಸಿ'

Vishwanath S
Updated On : 26 Jan 2014, 12:49 pm

ಕ.ಪ್ರ.ವಾರ್ತೆ, ಶಿವಮೊಗ್ಗ, ಜ.25
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಶೆ.85ರಷ್ಟು ಮತದಾನದ ಗುರಿ ಹೊಂದಿದು,್ದ ನಿಷ್ಪಕ್ಷಪಾತ ಚುನಾವಣೆ ಪ್ರಕ್ರಿಯೆಯಲ್ಲಿ ಎಲ್ಲ ಮತದಾರರೂ ಭಾಗವಹಿಸಬೇಕಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ವಿಪುಲ್ ಬನ್ಸಲ್ ಹೇಳಿದ್ದಾರೆ.
ಭಾರತ ಚುನಾವಣಾ ಆಯೋಗ ಮತ್ತು ಶಿವಮೊಗ್ಗ ಜಿಲ್ಲಾಡಳಿತದ ಸಹಯೋಗದಲ್ಲಿ ಶನಿವಾರ ಹಮ್ಮಿಕೊಳ್ಳಲಾದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿದ್ದ ಅವರು, ಚುನಾವಣೆ ಬಗ್ಗೆ ಮತದಾರರಲ್ಲಿ ಜಾಗೃತಿ ಮೂಡಿಸಿದ ಪರಿಣಾಮ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಶೇ.6 ರಷ್ಟು ಮತದಾನ ಹೆಚ್ಚಳವಾಗಿದೆ. 2009ರ ಲೋಕಸಭಾ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಶೇ.62 ರಷ್ಟು ಮತದಾನವಾಗಿದ್ದು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಶೇ.85 ರಷ್ಟು ಮತದಾನದ ಗುರಿಯಾಗಿಸಿಕೊಳ್ಳಲಾಗಿದೆ ಎಂದರು.
ಮತದಾರರು ಜಾಗೃತರಾಗಿ ಯಾವುದೇ ಪೂರ್ವಾಗ್ರಹ ಪೀಡಿತರಾಗದೆ ಅಥವಾ ಯಾವುದೇ ಪ್ರಲೋಬನೆಗಳೊಳಗಾಗದೆ ನಿಷ್ಟಕ್ಷಪಾತ ಚುನಾವಣೆಯಲ್ಲಿ ಮತದಾರರು ಭಾಗವಹಿಸಬೇಕು ಎಂದರು.
ಜಿಪಂ ಸಿಇಒ ಸಸಿಕಾಂತ್ ಸೆಂಥಿಲ್, ಮುಂದಿನ ಚುನಾವಣೆಯಲ್ಲಿ ಯುವಕರ ಪಾತ್ರ ಬಹು ಮುಖ್ಯ. ಯುವ ಸಮುದಾಯ ಕೇವಲ ಮತ ಹಾಕಿ ಸುಮ್ಮನಿರುವುದಲ್ಲ. ನ್ಯಾಯಯುತ ಚುನಾವಣೆಗಾಗಿ ಇಡೀ ಚುನಾವಣೆ ಪ್ರಕ್ರಿಯೆಯಲ್ಲಿ ಭಾಗಿಯಾಗಬೇಕು ಎಂದರು.
ಮತದಾನದ ಹಕ್ಕು ಪಡೆದ ಯುವ ಮತದಾರರಿಗೆ ಎಪಿಕ್ ಕಾರ್ಡ್‌ಗಳನ್ನು ವಿತರಿಸಲಾಯಿತು ಹಾಗೂ ಮತದಾನದ ಪ್ರತಿಜ್ಞಾ ವಿಧಿಯನ್ನು ಬೋಧಿಸಲಾಯಿತು.
ಸೂಡಾ ಆಯುಕ್ತ ಜೆ.ಆರ್. ಜನಾರ್ಧನ್, ಉಪ ವಿಭಾಗಾಧಿಕಾರಿ ಸಿ.ಎನ್. ಶ್ರೀಧರ್, ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕಿ ಇಂದುಮತಿ, ತಹಸೀಲ್ದಾರ್ ಕೊಟ್ರೇಶ್, ಚುನಾವಣಾ ತಹಸೀಲ್ದಾರ್ ಗಣಪತಿ ಕಟ್ಟಿನಕೆರೆ ಉಪಸ್ಥಿತರಿದ್ದರು.
ಮಹಾನಗರ ಪಾಲಿಕೆ ಆಯುಕ್ತ ಮೂಕಪ್ಪ ಕರಭೀಮಣ್ಣನವರ್ ಸ್ವಾಗತಿಸಿದರು. ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಗಣೇಶ್ ವಂದಿಸಿದರು.
ಕಾರ್ಯಕ್ರಮಕ್ಕೆ ಮುನ್ನ ಮಹಾವೀರ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಮತದಾನದ ಜಾಗೃತಿ ಮೂಡಿಸಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement