ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ಸಾಧಕರ ಗುರುತಿಸಿ ಗೌರವಿಸಿ: ಡಾ.ಉದಯಕುಮಾರ್

Vishwanath S
Updated On : 28 Jan 2014, 11:43 am

ಸಾಗರ:  ಸ್ಥಳೀಯ ಕಲಾ ಪ್ರಕಾರಗಳನ್ನು ಉಳಿಸುವುದು, ಕಲಾವಿದರನ್ನು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರನ್ನು ಗುರುತಿಸಿ ಗೌರವಿಸುವ ಕೆಲಸ ಮಾಡಿದಾಗ ಗಣರಾಜ್ಯೋತ್ಸವದಂತಹ ಕಾರ್ಯಕ್ರಮಗಳು ಹೆಚ್ಚು ಅರ್ಥಪೂರ್ಣವಾಗುತ್ತದೆ ಎಂದು ಉಪವಿಭಾಗಾಧಿಕಾರಿ ಡಾ.ಉದಯಕುಮಾರ್ ಶೆಟ್ಟಿ ಹೇಳಿದರು.
ಗಣರಾಜ್ಯೋತ್ಸವ ಅಂಗವಾಗಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ನಗರಸಭೆ ವತಿಯಿಂದ ಭಾನುವಾರ ಹಮ್ಮಿಕೊಂಡಿದ್ದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರನ್ನು ಸನ್ಮಾನಿಸಿ ಅವರು ಮಾತನಾಡಿದರು.
ಗಮನಹರಿಸಿ:  ವಿಶ್ವದ ಯಾವುದೇ ರಾಷ್ಟ್ರದಲ್ಲಿಯೂ ಇರದಷ್ಟು ಕಲೆ, ಸಾಂಸ್ಕೃತಿಕ ಹಾಗೂ ಸಾಹಿತ್ಯ ಪ್ರಾಕಾರಗಳು ನಮ್ಮಲ್ಲಿವೆ. ಇದನ್ನು ಬೆಳೆಸುವ ನಿಟ್ಟಿನಲ್ಲಿ ಯುವಜನಾಂಗ ದೃಢ ಮನಸ್ಸು ಮಾಡಬೇಕು. ಇಂತಹ ಉತ್ಸವಗಳಿಗೆ ಮಾತ್ರ ತಮ್ಮ ಕಲೆ ಸೀಮಿತಗೊಳಿಸದೆ ಇತರೆ ಸಂದರ್ಭದಲ್ಲಿಯೂ ಕಲಾ ಪ್ರದರ್ಶನ ನೀಡಿ ಅದನ್ನು ಇನ್ನಷ್ಟು ಗಟ್ಟಿಗೊಳಿಸುವ ಬಗ್ಗೆ ಗಮನ ಹರಿಸಬೇಕು ಎಂದು ಹೇಳಿದರು.
ಪ್ಯಾರ ಒಲಿಂಪಿಕ್ಸ್‌ನಲ್ಲಿ ಸಾಧನೆ ಮಾಡಿದ ಹೇರಂಭ, ಮಯೂರ ಎನ್. ಹೆಗಡೆ, ವಿಜ್ಞಾನ ಕ್ಷೇತ್ರದಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ ಅಕ್ಷಯ ಕೆ.ಆರ್. ಹಾಗೂ ಯೋಗಾಸನಾ ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡಿದ ರಾಘವೇಂದ್ರ ಆರ್. ಅವರನ್ನು ಸನ್ಮಾನಿಸಲಾಯಿತು. ತಹಸೀಲ್ದಾರ್ ಸಾಜಿದ್ ಅಹ್ಮದ್ ಮುಲ್ಲಾ, ಶಿಕ್ಷಣಾಧಿಕಾರಿ ಪಿ.ಲಿಂಗಪ್ಪ ಹಾಜರಿದ್ದರು. ಉಷಾ ಸ್ವಾಗತಿಸಿದರು. ಗುರುಪ್ರಸಾದ್ ವಂದಿಸಿದರು. ರವಿ ಜಂಬಗಾರು ನಿರೂಪಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement