ಹಂಪಿ ವಿವಿ ಕುಲಪತಿ ಕಾರು ಡಿಕ್ಕಿ: ಬೈಕ್ ಸವಾರ ಸಾವು
ಗುಲ್ಬರ್ಗ: ಹಂಪಿ ವಿಶ್ವವಿದ್ಯಾಲಯದ ಕುಲಪತಿ ಬೋರಲಿಂಗಯ್ಯ ಅವರು ಪ್ರಯಾಣಿಸುತ್ತಿದ್ದ ಕಾರು ಶಹಾಬಾದ್ ಹತ್ತಿರ ಬೈಕ್ ಡಿಕ್ಕಿಗೆ ಹೊಡೆದಿದ್ದು, ಬೈಕ್ ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಮಂಗಳವಾರ ಸಂಭವಿಸಿದೆ. ಈ ರಸ್ತೆ ದುರಂತದಲ್ಲಿ ಸಾವನ್ನಪ್ಪಿರುವವರನ್ನು ಭೀಮರಾವ ಶಹಾಬಾದ್(50) ಎಂದು ಗುರುತಿಸಲಾಗಿದೆ. ಫರತಾಬಾದ್ ಪೊಲೀಸರು ಕಾರು ಚಾಲಕನನ್ನು ಬಂಧಿಸಿ ವಶಕ್ಕೆ ತೆಗೆದುಕೊಂಡಿದ್ದಾರೆ. ಈ ಘಟನೆಯಲ್ಲಿ ಕುಲಪತಿ ಬೋರಲಿಂಗಯ್ಯ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಫರತಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಕುಲಪತಿ ಕಾರನ್ನು ಜಪ್ತಿ ಮಾಡಿಕೊಂಡಿದ್ದಾರೆ.