ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ಯುಜಿಡಿ ಕಾಮಗಾರಿ ಕಳಪೆ ನಾಗರಿಕರಿಂದ ಪ್ರತಿಭಟನೆ

Mainashree
Updated On : 10 Jul 2014, 9:42 am

ಶಿವಮೊಗ್ಗ: ಶಾಂತಿ ನಗರದಲ್ಲಿ ನಡೆದಿರುವ ಯುಜಿಡಿ ಕಾಮಗಾರಿ ಕಳಪೆಯಾಗಿದ್ದು ಕೂಡಲೇ ತಪ್ಪಿತಸ್ಥ ಅಧಿಕಾರಿಗಳು, ಗುತ್ತಿಗೆದಾರರ ವಿರುದ್ಧ ಕ್ರಮಕೈಗೊಳ್ಳುವಂತೆ ಒತ್ತಾಯಿಸಿ ನಾಗರಿಕರು ಬುಧವಾರ ಪ್ರತಿಭಟನೆ ನಡೆಸಿದರು.
ಶಾಂತಿ ನಗರ ನಾಗರಿಕ ಹಕ್ಕುಗಳ ವೇದಿಕೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ನಾಗರಿಕರು ಘೋಷಣೆ ಕೂಗಿ ಅಸಮಾಧಾನ ವ್ಯಕ್ತಪಡಿಸಿದರು. ಈಗಾಗಲೇ ಮಾಡಿರುವ ಯುಜಿಡಿ ಮ್ಯಾನ್ ಹೋಲ್‌ಗಳು ಮುರಿದು ಬಿದ್ದಿವೆ. ಸರ್ಕಾರದ ಲಕ್ಷಾಂತರ ರುಪಾಯಿ ಹಣ ಪೋಲಾಗಿದೆ ಎಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದರು.
ಕೊಳಚೆ ನಿರ್ಮೂಲನಾ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರು ಹಾಗೂ ಜಲಮಂಡಳಿಯ ಸಹಾಯಕ ಅಧಿಕಾರಿಗಳು ಸ್ಥಳಕ್ಕಾಗಮಿಸಿ ತಕ್ಷಣವೇ ಕಾಮಗಾರಿಯ ದುರಸ್ತಿ ಕಾರ್ಯ ನಡೆಸುವ ಭರವಸೆ ನೀಡಿದ ನಂತರ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಹಿಂತೆಗೆದುಕೊಳ್ಳಲಾಯಿತು.
ವೇದಿಕೆಯ ಸೈಯದ್ ಮಜೀಬುಲ್ಲಾ, ಶಾಂತಮ್ಮ, ರಾಮು, ಇರ್ಫಾನ್, ಜಯಪ್ರಕಾಶ್, ಫೈರೋಜ್, ಸಂದೀಪ್, ಬಾಬು ಮೊದಲಾದವರು ಈ ಸಂದರ್ಭದಲ್ಲಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement