ಶಿವಮೊಗ್ಗ

ಪದಾಧಿಕಾರಿಗಳ ಪದಗ್ರಹಣ ಇಂದು

ಶಿವಮೊಗ್ಗ: ರೋಟರಿ ಕ್ಲಬ್ ಜ್ಯುಬಿಲಿ ಪದಾಧಿಕಾರಿಗಳ ಪದಗ್ರಹಣ ಜುಲೈ 12ರಂದು ಬೆಳಿಗ್ಗೆ 8.30ಕ್ಕೆ ಸವಳಂಗ ರಸ್ತೆಯ ರೋಟರಿ ಯೂತ್ ಸೆಂಟರ್‌ನಲ್ಲಿ ನಡೆಯಲಿದೆ ಎಂದು ಸಂಸ್ಥಾಪಕ ಅಧ್ಯಕ್ಷ ಅಶ್ವತ್ಥ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ರೋಟರಿ ನೂತನ ಅಧ್ಯಕ್ಷರಾಗಿ ಎಸ್.ಎಲ್.ಲಕ್ಷ್ಮೀಕಾಂತ, ಕಾರ್ಯದರ್ಶಿಯಾಗಿ ಎಂ.ತುಳಸೀರಾಂ ಕಾರ್ಯನಿರ್ವಹಿಸುವರು. ಎಚ್.ಡಿ.ಉದಯಶಂಕರ ಶಾಸ್ತ್ರಿ ಪದವಿ ಪ್ರದಾನ ಮಾಡಲಿದ್ದಾರೆ. ರೋಟರಿ ಸಹಾಯಕ ಗೌ. ಎಸ್.ನರಸಿಂಹ ಪ್ರಸಾದ್ ಉಪಸ್ಥಿತರಿರುವರು ಎಂದರು.
ಅಧ್ಯಕ್ಷ ಲಕ್ಷ್ಮೀಕಾಂತ್ ಮಾತನಾಡಿ, 2014-15ನೇ ಸಾಲಿನಲ್ಲಿ ಹಲವಾರು ಜನೋಪಯೋಗಿ ಕಾರ್ಯಗಳನ್ನು ಕೈಕೊಳ್ಳಲು ನಿರ್ಧರಿಸಲಾಗಿದೆ. ಪದಗ್ರಹಣ ಸಮಾರಂಭದ ದಿನ ವೈಯುಕ್ತಿಕವಾಗಿ ಸಂಕಷ್ಟದಲ್ಲಿರುವ ಕುಟುಂಬವೊಂದರ ಪಿಯುಸಿ ವಿದ್ಯಾರ್ಥಿಗೆ ರು. 20 ಸಾವಿರ ಸಹಾಯಧನ ನೀಡುತ್ತಿದ್ದೇನೆ. ಅದಲ್ಲದೇ ಆತನ ಐದು ವರ್ಷ ವಿದ್ಯಾಭ್ಯಾಸವನ್ನು  ರೋಟರಿಯೇ ನೋಡಿಕೊಳ್ಳಲಿದೆ ಎಂದರು.
ಜುಲೈನಲ್ಲಿ  ತಾಲೂಕಿನ 8ನೇ ತರಗತಿಯ ಸರ್ಕಾರಿ- ಖಾಸಗಿ ಶಾಲೆಯ 400 ಬಡ ವಿದ್ಯಾರ್ಥಿಗಳಿಗೆ ಉಚಿತವಾಗಿ ಬಿಳಿ ಸಮವಸ್ತ್ರ ವಿತರಿಸಲಾಗುವುದು.  ಆಗಸ್ಟ್‌ನಲ್ಲಿ ಎಸ್‌ಎಸ್‌ಎಲ್‌ಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದಿರುವ  ತಾಲೂಕಿನ ಎಲ್ಲ ಪ್ರೌಢಶಾಲೆಗಳ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಿಸಲಾಗುವುದು ಹಾಗೂ ಸೆಪ್ಟೆಂಬರ್‌ನಲ್ಲಿ ಶಿಕ್ಷಕರ ದಿನಾಚರಣೆ ನಿಮಿತ್ತ ನಿವೃತ್ತ ಶಿಕ್ಷಕರಿಗಾಗಿ ಕ್ರೀಡಾಕೂಟ ನಡೆಸಲಾಗುವುದು ಎಂದು ಹೇಳಿದರು.
ಅಕ್ಟೋಬರ್‌ನಲ್ಲಿ ಸಮಾಜದ ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದವರನ್ನು ಸನ್ಮಾನಿಸಲಾಗುವುದು. ನವೆಂಬರ್‌ನಲ್ಲಿ ಎಸ್‌ಎಸ್‌ಎಲ್‌ಸಿ ಓದುತ್ತಿರುವ ಸುಮಾರು 4 ಸಾವಿರ ಮಕ್ಕಳಿಗಾಗಿ ಪರೀಕ್ಷೆ ಎದುರಿಸುವ ಕುರಿತು ಉಚಿತ ಕಾರ್ಯಾಗಾರ ನಡೆಸಲಾಗುವುದು ಎಂದರು. ಹಾಲಿ ಅಧ್ಯಕ್ಷ ಆರ್.ರೇವಣಸಿದ್ಧಪ್ಪ, ಕಾರ್ಯದರ್ಶಿ ಸಿ.ಕೆ.ಬಾಲಚಂದ್ರ, ಮುಂದಿನ ಕಾರ್ಯದರ್ಶಿ ಎಂ.ತುಳಸೀರಾಂ ಮತ್ತಿತರರು ಇದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಾಳೆ CJPಯ ತಿರಂಗಾ ಮೆರವಣಿಗೆ ನಡೆಯಬೇಕಿದ್ದ ದೆಹಲಿಯ ಸೆಂಟ್ರಲ್ ಪಾರ್ಕ್ ಅನ್ನು 2 ದಿನ ಮುಚ್ಚಿದ NDMC!

ಕನ್ನಡಿಗರು ಕೊಟ್ಟ ದುಡ್ಡಲ್ಲೇ AR Rahman ತಮ್ಮ ಮೊದಲ ಸ್ಟುಡಿಯೋ ಕಟ್ಟಿದ್ದು: ನಟ ಯಶ್

ದೇಶಕ್ಕೆ ಹೇಗೆ ಬೆಂಕಿ ಹಚ್ಚಬೇಕು ಎಂಬುದನ್ನು ಬಾಂಗ್ಲಾದೇಶ ನಮಗೆ ತೋರಿಸಿಕೊಟ್ಟಿದೆ: ನೇಹಾ ಬೋರಾ ಹೇಳಿಕೆಗೆ ಬಿಜೆಪಿ ಆಕ್ರೋಶ!

Ramayana: 'ರಾಮಾಯಣ'ದ ರನ್ ಟೈಮ್ ಮೂರು ಗಂಟೆಗೂ ಹೆಚ್ಚು; ಅಮೆರಿಕದಲ್ಲಿ 'PG-13' ರೇಟಿಂಗ್!

ದೆಹಲಿಯ ರಾಮಲೀಲಾದಲ್ಲಿ ಈ ಬಾರಿ ರಾವಣನ ಜೊತೆಗೆ 30 ಅಡಿ ಎತ್ತರದ ಕಾಕ್ರೋಚ್ ಪ್ರತಿಕೃತಿ ದಹನ!