'ಚಿಕ್ಕ ಸಂಸಾರ ಮಹತ್ವದ ಅರಿವು ಮೂಡಿಸಿ'
ಭದ್ರಾವತಿ: ಚಿಕ್ಕ ಸಂಸಾರದ ಮಹತ್ವ ಕುರಿತು ಅರಿವು ಮೂಡಿಸಲು ಯುವಜನತೆ ಸಮುದಾಯದಲ್ಲಿ ಪ್ರಮುಖ ಪಾತ್ರ ವಹಿಸಬೇಕು ಎಂದು ತಾಲೂಕು ಪಂಚಾಯಿತಿ ಪ್ರಭಾರ ಅಧ್ಯಕ್ಷ ಎನ್.ಶ್ರೀನಿವಾಸ್ ಹೇಳಿದರು.
ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಶುಕ್ರವಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ, ತಾಲೂಕು ಆಡಳಿತ ಮತ್ತು ತಾಲೂಕು ಪಂಚಾಯಿತಿ, ತಾಲೂಕು ಆರೋಗ್ಯ ಅಧಿಕಾರಿಗಳು ಹಾಗೂ ನಗರಸಭೆ ಆಶ್ರಯದಲ್ಲಿ ಏರ್ಪಡಿಸಿದ್ದ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಪಂ ಸದಸ್ಯ ಷಡಾಕ್ಷರಿ ಯೋಜಿತ ಪರಿವಾರದಿಂದ ಆರೋಗ್ಯವಂತ ಕುಟುಂಬ ಮತ್ತು ಕುಟುಂಬ ಕಲ್ಯಾಣ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಪ್ರಾಸ್ತಾವಿಕ ಭಾಷಣವನ್ನು ತಾಲೂಕು ಆರೋಗ್ಯಾಧಿಕಾರಿ ಡಾ.ಗುಡದಪ್ಪ ಮಾಡಿದರು. ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಶ್ರೀಮತಿ ಕುಟುಂಬ ಕಲ್ಯಾಣ ಕಾರ್ಯಕ್ರಮದಲ್ಲಿ ಶಾಶ್ವತ ಮತ್ತು ತಾತ್ಕಾಲಿಕ ವಿಧಾನಗಳ ಬಗ್ಗೆ ಮಾತನಾಡಿದರು.