ಗಾಝಾ ಮೇಲೆ ಇಸ್ರೇಲ್ ದಾಳಿ ಖಂಡಿಸಿ ಪ್ರತಿಭಟನೆ
ಶಿವಮೊಗ್ಗ: ಗಾಝಾ ಮೇಲೆ ಇಸ್ರೇಲ್ ನಡೆಸಿದ ಭೀಕರ ದಾಳಿಯನ್ನು ಕೇಂದ್ರ ಸರ್ಕಾರ ಖಂಡಿಸಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಇಸ್ರೇಲ್ ಮೇಲೆ ಒತ್ತಡ ಹೇರಬೇಕು. ಇಸ್ರೇಲನ್ನು ಅಂತಾರಾಷ್ಟ್ರೀಯ ಅಪರಾಧಿ ನ್ಯಾಯಾಲಯಕ್ಕೆ ಕೊಂಡೊಯ್ಯಬೇಕೆಂದು ಆಗ್ರಹಿಸಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕಾರ್ಯಕರ್ತರು ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.
ಕಳೆದ ಕೆಲವು ದಿನಗಳಿಂದ ಪ್ಯಾಲಸ್ತೇನ್ ಮೇಲೆ ಇಸ್ರೇಲ್ ನಡೆಸಿದ ದಾಳಿಯಿಂದ ಸುಮಾರು 82ಕ್ಕೂ ಹೆಚ್ಚು ಮಹಿಳೆಯರು, ಮಕ್ಕಳು ಬಲಿಯಾಗಿದ್ದಾರೆ. ಇಸ್ರೇಲ್ ದಾಳಿ ಕೊನೆಗೊಳಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವ ಬಗ್ಗೆ ಚರ್ಚಿಸಲು ತುರ್ತು ಸಭೆ ಕರೆಯುವಂತೆ ಅರಬ್ ರಾಷ್ಟ್ರಗಳು ವಿಶ್ವಸಂಸ್ಥೆಯನ್ನು ಕೇಳಿಕೊಂಡಿವೆ.. ಈ ನಿಟ್ಟಿನಲ್ಲಿ ಕೇಂದ್ರ ಈ ದಾಳಿ ಖಂಡಿಸಬೇಕು ಹಾಗೂ ಕೇಂದ್ರ ಸರಕಾರವು ಇಸ್ರೇಲಿನೊಂದಿಗೆ ರಾಜತಾಂತ್ರಿಕ ಸಂಬಂಧವನ್ನು ಕಡಿದುಕೊಳ್ಳಬೇಕು ಎಂದು ಒತ್ತಾಯಿಸಿದರು.
ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಶಿವಮೊಗ್ಗ ಜಿಲ್ಲಾಧ್ಯಕ್ಷ ಶಾಹೀದ್ಖಾನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿಲಾನ್ ಖಾನ್, ಎಸ್ಡಿಪಿಐ ಜಿಲ್ಲಾಧ್ಯಕ್ಷ ಏಜಾಜ್ ಪಾಶ ಹಲವರು ಪ್ರತಿಭಟನೆಯಲ್ಲಿದ್ದರು.