ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ಕೆ.ಜಿ. ಕುಮಾರಸ್ವಾಮಿ ವಿರುದ್ಧ ಪ್ರತಿಭಟನೆ

Rashmi Kasaragodu
Updated On : 22 Jul 2014, 10:56 am

ಶಿವಮೊಗ್ಗ: ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದು ಈ ಹಿಂದೆ ಶಾಸಕರಾಗಿದ್ದ ಕೆ.ಜಿ.ಕುಮಾರಸ್ವಾಮಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಜಿಲ್ಲಾ ಪರಿಶಿಷ್ಟ ಜಾತಿ ಸಮುದಾಯಗಳ ಒಕ್ಕೂಟ ಸದಸ್ಯರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಕೆ.ಜಿ.ಕುಮಾರಸ್ವಾಮಿ ಪರಿಶಿಷ್ಟ ಜಾತಿ ಭೋವಿ ಎಂದು ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದಿದ್ದು, ತಕ್ಷಣದಿಂದಲೇ ಅದನ್ನು ರದ್ದುಗೊಳಿಸಿ, ಅರ್ಹ ಪರಿಶಿಷ್ಟ ಜಾತಿಯವರಿಗೆ ಆಗುತ್ತಿರುವ ಅನ್ಯಾಯ ಸರಿಪಡಿಸಿ ಕೊಡಬೇಕೆಂದು ಒತ್ತಾಯಿಸಿದರು.
ಕೆ.ಜಿ.ಕುಮಾರಸ್ವಾಮಿ ಒಕ್ಕಲಿಗ ಅಥವಾ ನಾಮಧಾರಿ ಒಕ್ಕಲಿಗ ಜಾತಿಗೆ ಸೇರಿದವರಾಗಿದ್ದು, ಶಾಲಾ ದಾಖಲಾತಿಗಳಲ್ಲಿಯೂ ಇದು ನಮೂದಾಗಿದೆ. ನಂತರದ ದಿನಗಳಲ್ಲಿ ಅಕ್ರಮವಾಗಿ ಮೀಸಲಾತಿ ಪಡೆಯುವ ದುರುದ್ದೇಶದಿಂದ ಸುಳ್ಳು ಜಾತಿ ಪ್ರಮಾಣ ಪತ್ರವನ್ನು ತಮ್ಮ ರಾಜಕೀಯ ಪ್ರಭಾವ ಬೀರಿ ಪಡೆದಿದ್ದಾರೆ ಎಂದು ಆರೋಪಿಸಿದರು.
ಒಕ್ಕೂಟದ ಪ್ರಮುಖ ಹನುಮಂತಪ್ಪ, ನಾನ್ಯಾ ನಾಯ್ಕ, ತಿಪ್ಪೇಸ್ವಾಮಿ, ನವುಲೆ ಮಂಜುನಾಥ್, ತಿಮ್ಮರಾಜು ಮತ್ತಿತರರು ಪ್ರತಿಭಟನೆಯಲ್ಲಿದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement