ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ಅಪಘಾತ: ಬೈಕ್ ಸವಾರ ಸಾವು

Rashmi Kasaragodu
Updated On : 24 Jul 2014, 11:13 am

ಆಯನೂರು: ಇಲ್ಲಿನ ದಾನವಂದಿ ಕ್ರಾಸ್ ಬಳಿ ನಡೆದ ರಸ್ತೆ ಅಪಘಾತದಲ್ಲಿ ಶಿಕಾರಿಪುರದ ರಾಮಚಂದ್ರ (40) ಎಂಬುವರು ಮೃತಪಟ್ಟಿದ್ದಾರೆ. ಶಿಕಾರಿಪುರದಿಂದ ಶುಂಠಿ ವ್ಯಾಪಾರಕ್ಕೆಂದು ಆಯನೂರಿಗೆ ದ್ವಿಚಕ್ರ ವಾಹನದಲ್ಲಿ ಬಂದಿದ್ದ ವಿನಯ್ ಹಾಗೂ ಕೇರಳ ಮೂಲದ ರಾಮಚಂದ್ರ, ಸಾಗರ ರಸ್ತೆಯಲ್ಲಿ ಸಂಚರಿಸುತ್ತಿದ್ದ ಕ್ರೂಸರ್ ವಾಹನಕ್ಕೆ ಡಿಕ್ಕಿ ಹೊಡೆದಿದ್ದಾರೆ. ಇದೇ ಸಂದರ್ಭದಲ್ಲಿ ನಿಯಂತ್ರಣ ತಪ್ಪಿ ಅದೇ ರಸ್ತೆಯಲ್ಲಿ ಬರುತ್ತಿದ್ದ ಟಾಟಾ ಏಸ್ ವಾಹನಕ್ಕೂ ಡಿಕ್ಕಿ ಹೊಡೆದಿದ್ದಾರೆ. ಗಂಭೀರವಾಗಿ ಗಾಯಗೊಂಡ ರಾಮಚಂದ್ರ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟರು. ವಿನಯ್‌ಗೆ ಗಂಭೀರ ಗಾಯಗಳಾಗಿವೆ. ಕ್ರೂಸರ್ ವಾಹನದಲ್ಲಿದ್ದ ಮೂವರು ಪ್ರಯಾಣಿಕರಿಗೂ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಕುಂಸಿ ಠಾಣೆ ಎಸ್ ಐ ಅಭಯ ಪ್ರಕಾಶ್ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿ ಕೊಂಡಿದ್ದಾರೆ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement