ಅಭ್ಯರ್ಥಿ ಆಯ್ಕೆಗೆ ಕಾಂಗ್ರೆಸ್ ಸಭೆ
ಶಿವಮೊಗ್ಗ: ಶಿಕಾರಿಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಅಭ್ಯರ್ಥಿ ಆಯ್ಕೆ ಮಾಡಲು ಕಾಂಗ್ರೆಸ್ ನಾಯಕರ ಸಭೆ ಜುಲೈ 25ರಂದು ನಗರದಲ್ಲಿ ನಡೆಯಲಿದೆ. ಚುನಾವಣೆಗೆ ಪಕ್ಷದ ವೀಕ್ಷಕರಾಗಿ ಕೆಪಿಸಿಸಿ ಅಧ್ಯಕ್ಷರಿಂದ ನೇಮಿಸಲ್ಪಟ್ಟಿರುವ ಮಾಜಿ ಸಂಸದ ಜಯಪ್ರಕಾಶ್ ಹೆಗಡೆ, ಮಾಜಿ ಸಚಿವೆ ಮೋಟಮ್ಮ ಸಭೆಯಲ್ಲಿ ಭಾಗವಹಿಸುವರು. ಅಂದು ಮಧ್ಯಾಹ್ನ 3 ಗಂಟೆಗೆ ನಡೆಯಲಿರುವ ಸಭೆಯಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ಆರ್. ಪ್ರಸನ್ನಕುಮಾರ್, ಎಐಸಿಸಿ ಸದಸ್ಯ ಮಂಜುನಾಥ ಭಂಡಾರಿ, ಮಾಜಿ ಶಾಸಕ ಕರಿಯಣ್ಣ, ಜಿ.ಪಂ. ಅಧ್ಯಕ್ಷ ಕಲಗೋಡು ರತ್ನಾಕರ್, ಉಪಾಧ್ಯಕ್ಷೆ ಗಾಯತ್ರಿ ಷಣ್ಮುಖಪ್ಪ ಹಾಗೂ ಮುಖಂಡರು ಭಾಗವಹಿಸುವರು.