ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ಡಿಸಿ ಕಚೇರಿ ಎದುರು ಕಾಂಗ್ರೆಸ್ ಕಾರ್ಮಿಕ ಘಟಕ ಪ್ರತಿಭಟನೆ

Rashmi Kasaragodu
Updated On : 24 Jul 2014, 11:13 am

ಶಿವಮೊಗ್ಗ: ಮೆಗ್ಗಾನ್ ಆಸ್ಪತ್ರೆಯಲ್ಲಿ ಜನರಿಕ್ ಔಷಧ ಮಾರಾಟ ಕೇಂದ್ರ ಸ್ಥಾಪಿಸುವಂತೆ ಕಾಂಗ್ರೆಸ್ ಕಾರ್ಮಿಕ ವಿಭಾಗದ ಜಿಲ್ಲಾ ಘಟಕ ಜಿಲ್ಲಾಡಳಿತವನ್ನು ಒತ್ತಾಯಿಸಿದೆ. ಬುಧವಾರ ಡಿಸಿ ಕಚೇರಿ ಎದುರು ಧರಣಿ ನಡೆಸಿದ ಸಂಘಟನೆಯ ಸದಸ್ಯರು, ಬಿಜೆಪಿ ಸರ್ಕಾರವಿದ್ದಾಗ ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಬಡ ರೋಗಿಗಳಿಗೆ ಶೇ.60 ರಿಯಾಯಿತಿ ದರದಲ್ಲಿ ಔಷಧಿ ನೀಡಲು ಜನರಿಕ್ ಔಷಧಿ ಮಳಿಗೆ ಆರಂಭಿಸುವ ನಿರ್ಧಾರ ತೆಗೆದುಕೊಂಡಿತು. ಆದರೆ, ಶಿವಮೊಗ್ಗದಲ್ಲಿ ಈ ಕೇಂದ್ರ ಆರಂಭವಾಗಲೇ ಇಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಮೆಗ್ಗಾನ್ ಆಸ್ಪತ್ರೆ ಸುತ್ತಮುತ್ತ ಖಾಸಗಿ ಮೆಡಿಕಲ್ ಶಾಪ್‌ಗಳಿದ್ದು, ಇವುಗಳಿಂದ ಸರ್ಕಾರಿ ಆಸ್ಪತ್ರೆಯ ಕೆಲ ವೈದ್ಯರಿಗೆ ಹಣ ಸಂದಾಯವಾಗುತ್ತಿದೆ. ಅಲ್ಲದೇ ಈ ಮೆಡಿಕಲ್ ಶಾಪ್‌ಗಳಿಗೆ ಔಷಧಿ ವಿತರಿಸುವ ಏಜೆನ್ಸಿಯಿಂದಲೂ ಇದಕ್ಕೆ ಅಡಚಣೆಯಾಗಿದೆ ಎಂದು ಆರೋಪಿಸಿದರು. ಮುಖಂಡ ದೇವೇಂದ್ರಪ್ಪ, ಮಧುಸೂಧನ್, ರೇಷ್ಮಾ, ವಿನಯ್, ಚೇತನ್, ಶಶಿಕುಮಾರ್ ಇತರರು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement