ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ಕಾಂಗ್ರೆಸ್ ಅಪಪ್ರಚಾರಕ್ಕೆ ಕಿವಿಗೊಡದಿರಿ: ಜೆಡಿಎಸ್ ನಿಯೋಜಿತ ಅಭ್ಯರ್ಥಿ ಬಳಿಗಾರ್

Rashmi Kasaragodu
Updated On : 28 Jul 2014, 10:49 am

ಶಿರಾಳಕೊಪ್ಪ: ತಾಲೂಕಿನಾದ್ಯಂತ ಮರು ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಜೆಡಿಎಸ್ ಬೆಂಬಲ ನೀಡಲಿದೆ ಎಂದು ಕಾಂಗ್ರೆಸ್ ಅಪಪ್ರಚಾರ ಮಾಡುತ್ತಿದೆ. ಮತದಾರರು ಇದಕ್ಕೆಲ್ಲ ಕಿವಿಗೊಡಬಾರದು ಎಂದು  ಜೆಡಿಎಸ್ ನಿಯೋಜಿತ ಅಭ್ಯರ್ಥಿ ಬಳಿಗಾರ್ ತಿಳಿಸಿದರು.
ಪಟ್ಟಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಜೆಡಿಎಸ್‌ಗೆ ತಾಲೂಕಿನಲ್ಲಿ ಅನುಕಂಪದ ಮತಗಳಿವೆ. ಹಾಗೆಯೇ ಬೆಂಬಲವಿದೆ. ಹೀಗಿರುವಾಗ ಕಾಂಗ್ರೆಸ್ ಜೊತೆ ಯಾವುದೇ ಹೊಂದಾಣಿಕೆಯ ಮಾತೇ ಇಲ್ಲ ಎಂದು ಸ್ಪಷ್ಟ ಪಡಿಸಿದರು.
ಪಕ್ಷ ಈಗಾಗಲೇ ಹೋಬಳಿ ಮಟ್ಟದಲ್ಲಿ ಕಾರ್ಯಕರ್ತರ ಸಭೆ ನಡೆಸುತ್ತಿದೆ. ಬಿಜೆಪಿ ವಿರುದ್ಧ ನಮ್ಮನ್ನು ಸೂಕ್ತಅಭ್ಯರ್ಥಿ ಎಂದು ತಾಲೂಕಿನ ಮತದಾರರು ಬೆಂಬಲಿಸುತ್ತಿದ್ದಾರೆ.
ಕಳೆದ ಚುನಾವಣೆ ನಂತರ ತಾಲೂಕಿನ ಕಾರ್ಯಕರ್ತರೊಂದಿಗೆ ತಾವು ನಿರಂತರ ಸಂಪರ್ಕ ಹೊಂದಿದ್ದು, ಕಳೆದ 15-20 ವರ್ಷಗಳಿಂದ ಇಲ್ಲಿನ ಜನರ ಸಂಕಷ್ಟಕ್ಕೆ ಸ್ಪಂದಿಸಿರುವ ನನ್ನನ್ನು ತಾಲೂಕಿನ ಜನತೆ ಕೈಬಿಡುವುದಿಲ್ಲ. ಹಾಗೆಯೇ ಬಿಜೆಪಿ ಮತ್ತು ಕಾಂಗ್ರೆಸ್‌ನ ಹಲವಾರು ನಾಯಕರು ನಮ್ಮ ಸಂಪರ್ಕದಲ್ಲಿದ್ದಾರೆ ಎಂದು ಹೇಳಿದರು.
ತಾ. ಬಿಜೆಪಿ ಅಧ್ಯಕ್ಷ ಹಾಗೂ ಜಿಪಂ ಸದಸ್ಯ ದಾನಿ ರುದ್ರಪ್ಪನಂತಹವರು ಕಾಂಗ್ರೆಸ್‌ನಲ್ಲಿ ಸರಿಯಾದ ಅಭ್ಯರ್ಥಿ ಇಲ್ಲದ ಕಾರಣ ಜೆಡಿಎಸ್ ಅಭ್ಯರ್ಥಿ ಬಳಿಗಾರ್ ಉತ್ತಮ ವ್ಯಕ್ತಿ ಅವರನ್ನು ಬೆಂಬಲಿಸುವುದಾಗಿ ತಿಳಿಸಿದ್ದಾರೆ ಎಂದು ಹೇಳಿದರು.
ರಾಜ್ಯ ಪ್ರಧಾನ ಕಾರ್ಯದರ್ಶಿ ಗಜೇಂದ್ರ, ತಾ. ಪ್ರಧಾನ ಕಾರ್ಯದರ್ಶಿ ಜಯಾನಾಯ್ಕ ಉಡಗಣಿ ಹೋಬಳಿ ಮುಖಂಡ ತೇಜ್ಯಾನಾಯಕ್, ತಾಳಗುಂದ ಹೋಬಳಿ ಮುಖಂಡ ರುದ್ರಪ್ಪ, ಕೊಟ್ರೇಶಪ್ಪ, ಮಂಜುನಾಥ  ಅನೇಕ ಪ್ರಮುಖರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement