ಕೊಡಚಾದ್ರಿ ಕಾಲೇಜು ವಿದ್ಯಾರ್ಥಿಗಳ ಜೊತೆ ಖ್ಯಾತ ಚಿತ್ರ ಸಾಹಿತಿ ಕವಿರಾಜ್ ಸಂವಾದ
ಹೊಸನಗರ: ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಕೊಡಚಾದ್ರಿ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಜು.30ರಂದು ಪತ್ರಿಕಾ ದಿನಾಚರಣೆ ಆಯೋಜಿಸಿದೆ.
ಜಿಲ್ಲಾ ವಾರ್ತಾ ಇಲಾಖೆ ಸಹಾಯಕ ನಿರ್ದೇಶಕ ಹಿಮಂತರಾಜು ಕಾರ್ಯಕ್ರಮ ಉದ್ಘಾಟಿಸುವರು. ಮುಖ್ಯ ಅತಿಥಿಯಾಗಿ ಖ್ಯಾತ ಚಿತ್ರ ಸಾಹಿತಿ ಕವಿರಾಜ್ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಲಿದ್ದಾರೆ. ಕಾಲೇಜಿನ ಪ್ರಾಂಶುಪಾಲ ಚಂದ್ರಶೇಖರ್ ಮತ್ತು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ವೈ.ಕೆ.ಸೂರ್ಯನಾರಾಯಣ ಉಪಸ್ಥಿತರಿರುವರು. ಸಂಘದ ಅಧ್ಯಕ್ಷ ನಾಗರಾಜ್ ಅಧ್ಯಕ್ಷತೆ ವಹಿಸುವರು. ಇದೇ ವೇಳೆ ಸಂಘದ ವತಿಯಿಂದ ಆಯೋಜಿಸಲಾಗಿದ್ದ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಲಾಗುವುದು.