ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ಚುನಾವಣೆ ಮುಂದೂಡಿಕೆ

Lingaraj Badiger
Updated On : 3 Jun 2014, 11:29 am

ಶಿವಮೊಗ್ಗ: ಜೂನ್ 4ರಂದು ನಡೆಯಬೇಕಿದ್ದ ಜಿಲ್ಲಾ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆಯನ್ನು ವಿಧಾನಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಮುಂದೂಡಲಾಗಿದೆ.
ವಿಧಾನಪರಿಷತ್ತಿನ ಬೆಂಗಳೂರು ಶಿಕ್ಷಕರ ಕ್ಷೇತ್ರ ಹಾಗೂ ಕರ್ನಾಟಕ ಆಗ್ನೇಯ ಪದವೀದರ ಕ್ಷೇತ್ರಗಳ ಚುನಾವಣಾ ಪ್ರಕ್ರಿಯೆಗಳು ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಪ್ರಸ್ತುತ ನಿಗಧಿಯಾಗಿದ್ದ ತುಮಕೂರು ಮತ್ತು ಶಿವಮೊಗ್ಗ ಜಿಲ್ಲಾ ಪಂಚಾಯಿತಿಗಳ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆಗಳನ್ನು ಮುಂದೂಡಲಾಗಿದ್ದು, ಮುಂದಿನ ದಿನಾಂಕವನ್ನು ತಿಳಿಸಲಾಗುವುದೆಂದು ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರ ಪ್ರಕಟಣೆ ತಿಳಿಸಿದೆ. ಈ ನಡುವೆ, ಬೆಂಗಳೂರು ನಗರ, ಕೋಲಾರ, ಚಿತ್ರದುರ್ಗ ಹಾಗೂ ದಾವಣಗೆರೆ ಜಿಲ್ಲಾ ಪಂಚಾಯಿತಿಗಳ 3ನೇ ಅವಧಿಯ ಮೀಸಲಿಗೆ ಸಂಬಂಧಿಸಿದಂತೆ ಹೈಕೋರ್ಟ್ ತಡೆಯಾಜ್ಞೆ ನೀಡಿರುವ ಹಿನ್ನೆಲೆಯಲ್ಲಿ ಈ ಚುನಾವಣೆಯು ಮುಂದೂಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement