ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ಕುಡಿಯುವ ನೀರಿನ ಕಾಮಗಾರಿ ಪೂರ್ಣಗೊಳಿಸಲು ಸೂಚನೆ

Lingaraj Badiger
Updated On : 4 Jun 2014, 11:28 am

ಕ.ಪ್ರ.ವಾರ್ತೆ, ಶಿಕಾರಿಪುರ, ಜೂ.3
ಕುಡಿಯುವ ನೀರು ಸರಬರಾಜು ಸೇರಿದಂತೆ ಅದ್ಯತೆ ಕಾಮಗಾರಿಗಳನ್ನು ಶೀಘ್ರವೇ ಪೂರ್ಣಗೊಳಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕಿಮ್ಮನೆ ರತ್ನಾಕರ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಮಂಗಳವಾರ ಇಲ್ಲಿ ತಾಲೂಕು ಪಂಚಾಯ್ತಿ ಕಚೇರಿಯಲ್ಲಿ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದ ಅವರು, ಆದ್ಯತಾ ಕಾಮಗಾರಿಗಳಿಗೆ ಅನುದಾನದ ಕೊರತೆ ಇಲ್ಲ. ಈ ಹಿನ್ನೆಲೆಯಲ್ಲಿ ಕುಡಿಯುವ ನೀರು ಸೇರಿದಂತೆ ವಿವಿಧ ಅಗತ್ಯದ ಕಾಮಗಾರಿಗಳನ್ನು ಕೂಡಲೇ ಪೂರ್ಣಗೊಳಿಸಬೇಕು ಎಂದರು.
ಮೆಸ್ಕಾಂಗೆ ಸೂಚನೆ: ಕುಡಿಯುವ ನೀರಿನ ಯೋಜನೆಗಳಿಗೆ ವಿದ್ಯುತ್ ಸಂಪರ್ಕ ಬಾಕಿ ಇದ್ದರೆ ಕೂಡಲೆ ಕ್ರಮ ಕೈಗೊಳ್ಳಬೇಕು ಎಂದ ಅವರು, ರೈತರ ಬೆಳೆಗಳಿಗೆ ವಿದ್ಯುತ್ ಸಂಪರ್ಕದಿಂದಲೇ ತೊಂದರೆ ಎಂಬ ಸಮಸ್ಯೆ ಮತ್ತೆ ತಲೆದೊರದಂತೆ ಎಚ್ಚರ ವಹಿಸುವಂತೆ ಮೆಸ್ಕಾಂ ಅಧಿಕಾರಿಗಳಿಗೆ ಅವರು ಸೂಚಿಸಿದರು.
ಮುಂಗಾರು ಹಂಗಾಮು ಆರಂಭವಾಗಿರುವುದರಿಂದ ರೈತರಿಗೆ ಬಿತ್ತನೆ ಬೀಜ ಮತ್ತು ರಸ ಗೊಬ್ಬರಗಳಿಗೆ ಯಾವುದೇ ಕೊರತೆ ಆಗಬಾರದು ಎಂದ ಅವರು ಗೊಬ್ಬರ ಕಾಳಸಂತೆ ವ್ಯಾಪಾರ ಹಾಗೂ ಕಳಪೆ ಬೀಜಗಳ ಮಾರಾಟದ ಬಗ್ಗೆ ಎಚ್ಚರ ವಹಿಸುವಂತೆ ಸೂಚಿಸಿದರು.
ಅನುದಾನ ನೀಡಿ: ತಾಲೂಕು ಪಂಚಾಯ್ತಿಯಿಂದ ವಸತಿ ಯೋಜನೆಗಳಲ್ಲಿ ಸರಿಯಾಗಿ ಫಲಾನುಭವಿಗಳಿಗೆ ಸೌಲಭ್ಯ ಸಿಗುತ್ತಿಲ್ಲ ಎಂಬ ದೂರಿನ ಹಿನ್ನೆಲೆಯಲ್ಲಿ ತಕ್ಷಣವೇ ಆದ ತಪ್ಪುಗಳನ್ನು ಸರಿಪಡಿಸಿಕೊಳ್ಳುವಂತೆ ಹಾಗೂ ಫಲಾನುಭವಿಗಳಿಗೆ ಅನುದಾನಗಳನ್ನು ಬಿಡುಗಡೆಗೊಳಿಸುವಂತೆ ಅವರು ತಿಳಿಸಿದರು.
ತಾಲೂಕು ಪಂಚಾಯ್ತಿ ಅಧ್ಯಕ್ಷೆ ಲೀಲಾವತಿ ಲಕ್ಷ್ಮಣ್, ಉಪಾಧ್ಯಕ್ಷೆ ಸರೋಜಮ್ಮ, ಜಿಲ್ಲಾ ಪಂಚಾಯ್ತಿ ಸದಸ್ಯರಾದ ದಾನೇರ ರುದ್ರಪ್ಪ, ಈಶ್ವರಪ್ಪ, ಬಂಗಾರಿ ನಾಯಕ್, ಈಸೂರು ಬಸವರಾಜು, ಜಿಲ್ಲಾ ಪಂಚಾಯ್ತಿ ಉಪ ಕಾರ್ಯದರ್ಶಿ ಗೋಪಾಲ್ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement