ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

'ಸಕಾಲ'ಕ್ಕೆ ಜನತೆ ಒತ್ತು ನೀಡಲಿ: ಸ್ಪೀಕರ್ ಕಾಗೋಡು ತಿಮ್ಮಪ್ಪ

Srinivasa Murthy VN
Updated On : 5 Jun 2014, 1:03 am

ಸಾಗರ: ಸಕಾಲ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ತರುವ ನಿಟ್ಟಿನಲ್ಲಿ ಅಧಿಕಾರಿಗಳು ಹಾಗೂ ಸದ್ಬಳಕೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಸಾರ್ವಜನಿಕರು ಹೆಚ್ಚಿನ ಗಮನ ಹರಿಸಬೇಕು ಎಂದು ವಿಧಾನಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ ಹೇಳಿದರು.
ಇಲ್ಲಿನ ತಹಸೀಲ್ದಾರ್ ಕಚೇರಿಯಲ್ಲಿ ಕಸಬಾ ಹೋಬಳಿ ಮಟ್ಟದ ಅಟಲ್ ಜಿ ಜನಸ್ನೇಹಿ ಕೇಂದ್ರವನ್ನು ಉದ್ಘಾಟಿಸಿ, ಇಂತಹ ಯೋಜನೆಗಳು ಜನಹಿತಕ್ಕಾಗಿ ಬಳಸಿಕೊಳ್ಳುವ ಮನಸ್ಥಿತಿ ಜಾಗೃತವಾಗಬೇಕು ಎಂದರು.
ಇಂತಹ ಯೋಜನೆಗಳನ್ನು ಜಾರಿಗೆ ತರುವಾಗ ಮೇಲ್ಮಟ್ಟದಲ್ಲಿ ಅಧಿಕಾರಿಗಳು ಹೆಚ್ಚು ಚಿಂತನೆ ಮಾಡಿರುತ್ತಾರೆ. ಅವರ ಯೋಚನೆ ಸ್ಥಳೀಯವಾಗಿ ಕೆಲಸ ಮಾಡುವವರು ಅರ್ಥ ಮಾಡಿಕೊಳ್ಳಬೇಕು. ಯೋಜನೆಯನ್ನು ಕೆಲವರು ದುರುಪಯೋಗ ಮಾಡಿಕೊಳ್ಳುವ ಸಾಧ್ಯತೆಯೂ ಇರುತ್ತದೆ. ಮಾಹಿತಿ ಹಕ್ಕು, ಸಕಾಲದಡಿ ಅರ್ಜಿ ಸಲ್ಲಿಸಿ ಅಧಿಕಾರಿಗಳಿಗೆ, ನೌಕರರಿಗೆ ಕೆಲಮೊಮ್ಮೆ ತೊಂದರೆ ಕೊಡುವ ಕೆಲಸ ನಡೆಯುತ್ತದೆ. ಇದರಿಂದ ಯೋಜನೆಯ ಒಳ್ಳೆಯ ಉದ್ದೇಶ ವಿಫಲವಾಗುತ್ತದೆ ಎಂದರು.
ಸಂತೆ ಮೈದಾನಕ್ಕೆ ಜಾಗ: ತಹಸೀಲ್ದಾರ್ ಕಚೇರಿ ಶಿಥಿಲಾವಸ್ಥೆಯಲ್ಲಿದ್ದು, ಅದನ್ನು ಪುನರ್ ನಿರ್ಮಾಣ ಮಾಡುವ ನಿಟ್ಟಿನಲ್ಲಿ 2 ಕೋಟಿ ವೆಚ್ಚದ ಯೋಜನೆ ಸಿದ್ಧಪಡಿಸಲಾಗಿದೆ. ಈಗಾಗಲೇ ಹಣ ಬಿಡುಗಡೆಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಗಣಪತಿ ಕೆರೆ ಪಕ್ಕದಲ್ಲಿ ಸಂತೆ ಮೈದಾನ ನಿರ್ಮಾಣಕ್ಕೆ ಎಪಿಎಂಸಿಯಿಂದ 1.50 ಕೋಟಿ ವೆಚ್ಚದ ಯೋಜನೆ ಸಿದ್ಧವಾಗಿದ್ದು, ಟೆಂಡರ್ ಹಂತಕ್ಕೆ ಬಂದಿದೆ. ತಾಳಗುಪ್ಪದಲ್ಲಿ ಸಂತೆ ಮೈದಾನ ನಿರ್ಮಾಣಕ್ಕೆ 2 ಎಕರೆ ಜಾಗವನ್ನು ಗುರುತಿಸಲಾಗುತ್ತಿದೆ ಎಂದು ಹೇಳಿದರು.
ತಹಸೀಲ್ದಾರ್ ಜಿ.ಎಂ. ಬೋರ್ಕರ್, ಪೌರಾಯುಕ್ತ ಚಂದ್ರಶೇಖರ್, ಎಪಿಎಂಸಿ ಕಾರ್ಯದರ್ಶಿ ಶೈಲಜ, ಅಧ್ಯಕ್ಷ ಕೆ. ಹೊಳೆಯಪ್ಪ ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement