ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ಸಿಗಂಧೂರಿಗೆ ಬಸ್ ಸೌಲಭ್ಯಕ್ಕೆ ಮನವಿ

Lingaraj Badiger
Updated On : 9 Jun 2014, 11:22 am

ಸಾಗರ: ಸಿಗಂದೂರಿಗೆ ಸಾರಿಗೆ ಬಸ್ ಸೌಲಭ್ಯ ಕಲ್ಪಿಸುವಂತೆ ಒತ್ತಾಯಿಸಿ ತಾಲೂಕು ಬಿಜೆಪಿ ಘಟಕದಿಂದ  ಡಿಪೋ ಮುಖ್ಯಸ್ಥ ರಮೇಶ್ ಅವರಿಗೆ ಮನವಿ ಸಲ್ಲಿಸಲಾಯಿತು.
ಬಿಜೆಪಿ ಜಿಲ್ಲಾ ಮುಖಂಡ ಟಿ.ಡಿ.ಮೇಘರಾಜ್ ಮಾತನಾಡಿ, ಕಳೆದ ಎರಡು ತಿಂಗಳಿನಿಂದ ಸಾಗರ-ಹೊಳೆಬಾಗಿಲು-ಸಿಗಂದೂರಿಗೆ ಸಂಚರಿಸುತ್ತಿದ್ದ ಸಾರಿಗೆ ಬಸ್‌ನ್ನು ನಿಲ್ಲಿಸಲಾಗಿದೆ. ಇದರಿಂದ ವಿದ್ಯಾರ್ಥಿಗಳು, ಸಾರ್ವಜನಿಕರಿಗೆ ತೀವ್ರ ತೊಂದರೆಯಾಗುತ್ತಿದೆ. ಶಾಲೆ ಕಾಲೇಜು ಪ್ರಾರಂಭವಾಗಿದ್ದು, ಗ್ರಾಮೀಣ ಪ್ರದೇಶದ ಬಡ ವಿದ್ಯಾರ್ಥಿಗಳು ರಿಯಾಯಿತಿ ದರದಲ್ಲಿ ಪಾಸ್ ಪಡೆದಿದ್ದಾರೆ. ಏಕಾಏಕಿ ಬಸ್ ಸಂಚಾರ ನಿಲ್ಲಿಸಿದ್ದರಿಂದ ವಿದ್ಯಾರ್ಥಿಗಳು ಹೆಚ್ಚಿನ ಹಣ ನೀಡಿ ಖಾಸಗಿ ಬಸ್ಸಿನಲ್ಲಿ ಪ್ರಯಾಣಿಸಬೇಕಾದ ಅನಿವಾರ್ಯತೆ ಉಂಟಾಗಿದೆ ಎಂದು ವಿವರಿಸಿದರು.
ಹಿಂದಿನಿಂದಲೂ ಕೆಎಸ್‌ಆರ್‌ಟಿಸಿ ಹಾಗೂ ಖಾಸಗಿ ಬಸ್ಸುಗಳ ನಡುವೆ ಒಪ್ಪಂದವಿದೆ ಎಂದು ಸಾರ್ವಜನಿಕ ವಲಯದಲ್ಲಿ ಚರ್ಚೆ ನಡೆಯುತ್ತಿದೆ. ಖಾಸಗಿ ಬಸ್ ಸಂಚಾರ ಇರುವ ಕಡೆಗಳಲ್ಲಿ ಸರ್ಕಾರಿ ಬಸ್ಸುಗಳನ್ನು ಬಿಡಲು ಅಧಿಕಾರಿಗಳೇ ಮನಸ್ಸು ಮಾಡುತ್ತಿಲ್ಲ ಎಂಬ ದೂರು ಇದೆ. ಇದರಿಂದ ಸರ್ಕಾರಕ್ಕೆ ನಷ್ಟವಾಗುತ್ತಿದೆ. ಕೂಡಲೆ ಬಸ್ ಸಂಚಾರ ಆರಂಭಿಸಬೇಕು. ಇಲ್ಲವಾದರೆ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಎಪಿಎಂಸಿ ಉಪಾಧ್ಯಕ್ಷ ಬಿ.ಎ.ಇಂದೂಧರ ಗೌಡ ಮಾತನಾಡಿ, ಕೆಎಸ್‌ಆರ್‌ಟಿಸಿ ಬಸ್ ಸೌಲಭ್ಯ ಕಡಿತಗೊಳಿಸಿರುವುದರಿಂದ ಹೊಳೆಬಾಗಿಲು, ಅಂಬಾರಗೋಡ್ಲು, ಕೋಳೂರು, ಹುಲಿದೇವರಬನ, ಗೆಣಸಿನಕುಣಿ, ಆವಿನಹಳ್ಳಿ ಜನತೆ ಸಾರಿಗೆ ಬಸ್ ಸೌಲಭ್ಯದಿಂದ ವಂಚಿತರಾಗುವಂತೆ ಆಗಿದೆ.
ಸಾರಿಗೆ ಬಸ್ ಸೌಲಭ್ಯ ಕಲ್ಪಿಸುವಂತೆ ಗ್ರಾಮಸ್ಥರು ಹತ್ತಾರು ಬಾರಿ ಮನವಿ ಸಲ್ಲಿಸಿ, ಪ್ರತಿಭಟನೆ ಮಾಡಿದ್ದರೂ ಅಧಿಕಾರಿಗಳು ಗಮನ ಕೊಡುತ್ತಿಲ್ಲ. ತಕ್ಷಣ ಬಸ್ ಸೌಲಭ್ಯ ಕಲ್ಪಿಸದೆ ಹೋದರೆ ಗ್ರಾಮಸ್ಥರು ಡಿಪೋ ಎದುರು ಪ್ರತಿಭಟನೆ ನಡೆಸುವುದಾಗಿ ತಿಳಿಸಿದರು.
ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಯು.ಎಚ್.ರಾಮಪ್ಪ, ವ.ಶಂ.ರಾಮಚಂದ್ರ ಭಟ್, ಪ್ರಕಾಶ್‌ಕುಂಠೆ, ಕೆ.ಆರ್.ಗಣೇಶಪ್ರಸಾದ್, ರಾಮಣ್ಣ ಗಾಣಿಗ, ಸತೀಶ್, ಗಣಪತಿ ಮಂಡಗಳಲೆ, ತ್ಯಾಗರಾಜ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement