'ಮಹಿಳೆಯರಿಗೆ ಬಂದೂಕು ತರಬೇತಿ ಅಗತ್ಯ'
ಶಿವಮೊಗ್ಗ: ನಾಗರಿಕ ಬಂದೂಕು ತರಬೇತಿ ಶಿಬಿರಗಳಲ್ಲಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತಾಗಬೇಕು ಎಂದು ದಾವಣಗೆರೆ ಪೂರ್ವವಲಯ ಪೊಲೀಸ್ ಮಹಾನಿರ್ದೇಶಕ ಡಾ.ಎಸ್. ಪರಶಿವಮೂರ್ತಿ ಅಭಿಪ್ರಾಯಪಟ್ಟಿದ್ದಾರೆ.
ಪೊಲೀಸ್ ಇಲಾಖೆ, ರೋಟರಿ ರಿವರ್ ಸೈಡ್ ಸಹಯೋಗದಲ್ಲಿ ಆಯೋಜಿಸಲಾಗಿದ್ದ 20 ದಿನಗಳ ನಾಗರಿಕ ಬಂದೂಕು ತರಬೇತಿ ಕಾರ್ಯಾಗಾರದ ಸಮಾರೋಪದಲ್ಲಿ ಶಿಬಿರಾರ್ಥಿಗಳಿಗೆ ಬಹುಮಾನ ವಿತರಿಸಿ ಅವರು ಮಾತನಾಡಿದರು.
ಪೊಲೀಸ್ ಮತ್ತು ನಾಗರಿಕರ ನಡುವೆ ಉತ್ತಮ ಸಂಪರ್ಕ ಉಂಟುಮಾಡುವ ಉದ್ಧೇಶದಿಂದ ನಾಗರಿಕ ಬಂದೂಕು ತರಬೇತಿ ಶಿಬಿರವನ್ನು ಅಯೋಜಿಸಲಾಗುತ್ತದೆ ಎಂದರು.
ಜಿಲ್ಲಾ ಪೊಲೀಸ್ ಅಧೀಕ್ಷಕ ಕೌಶಲೇಂದ್ರ ಕುಮರ್ ಮಾತನಾಡಿ, ನಾಗರಿಕರಿಗೆ ಒಳ್ಳೆಯ ಉದ್ದೇಶದಿಂದ ಬಂದೂಕು ತರಬೇತಿ ನೀಡಲಾಗಿದೆ ಎಂದು ತಿಳಿಸಿದರು. ರೋಟರಿ ರಿವರ್ ಸೈಡ್ನ ಅಧ್ಯಕ್ಷ ಧನರಾಜ್ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ವಾರ್ತಾಧಿಕಾರಿ ಹಿಮಂತರಾಜು ಉಪಸ್ಥಿತರಿದ್ದರು.