ಜಿಲ್ಲೆಯ ಪಡಿತರ ಚೀಟಿದಾರರಿಗೆ ಸೂಚನೆ
ಶಿವಮೊಗ್ಗ: ಜಿಲ್ಲೆಯ ಎಲ್ಲಾ ಅರ್ಹ ಪಡಿತರ ಚೀಟಿದಾರರು ತಮ್ಮ ಮೊಬೈಲ್ ಸಂಖ್ಯೆ, ಎಪಿಕ್ (ಮತದಾರರ ಗುರುತಿನ ಚೀಟಿ) ಮತ್ತು ಆಧಾರ್ ಸಂಖ್ಯೆಯನ್ನು ಎಸ್‌ಎಂಎಸ್ ಮೂಲಕ ನೀಡಬೇಕಾಗಿರುತ್ತದೆ. ಒಂದೇ ಮೊಬೈಲ್ ಸಂಖ್ಯೆಯನ್ನು ಮೂರಕ್ಕಿಂತ ಹೆಚ್ಚಿನ ಕಾರ್ಡುಗಳಿಗಾಗಿ ಬಳಸತಕ್ಕದ್ದಲ್ಲವೆಂದು ಶಿವಮೊಗ್ಗ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಹಿರಿಯ ಉಪನಿರ್ದೇಶಕರು ತಿಳಿಸಿದ್ದಾರೆ.
ಚಾಲ್ತಿಯಲ್ಲಿರುವ ಪಡಿತರ ಚೀಟಿದಾರರು ತಮ್ಮ ಸರಿಯಾದ ಮೊಬೈಲ್ ಸಂಖ್ಯೆಯಿಂದ ಖಈಂಕಇ ಎಂದು ಟೈಪ್ ಮಾಡಿ ಸ್ಪೇಸ್ ಬಿಟ್ಟು ರೇಷನ್‌ಕಾರ್ಡ್ ಸಂಖ್ಯೆಯನ್ನು ನಮೂದಿಸಿ 9212357123 ಸಂಖ್ಯೆಗೆ ಎಸ್‌ಎಂಎಸ್ ಕಳುಹಿಸಬೇಕು (ಉದಾ- ಖಈಂಕಇ ಖಏ104138699).
ಹೊಸದಾಗಿ ಅರ್ಜಿ ಸಲ್ಲಿಸಿದವರು ಖಈಂಕಇ ಎಂದು ಟೈಪ್ ಮಾಡಿ ಸ್ಪೇಸ್ ಬಿಟ್ಟು ತಮ್ಮ ಸರಿಯಾದ ಅರ್ಜಿ ಸಂಖ್ಯೆಯನ್ನು ನಮೂದಿಸಿ 9212357123 ಎಂಬ ಸಂಖ್ಯೆಗೆ ಎಸ್‌ಎಂಎಸ್ ಕಳುಹಿಸಬೇಕು (ಉದಾ ಖಈಂಕಇ 201005385).
ಮೇಲಿನ ಮೊಬೈಲ್ ಸಂಖ್ಯೆಯನ್ನು ನೀಡಿದ ನಂತರ ಅದೇ ಮೊಬೈಲ್‌ನಿಂದ ಖಈಊಕಿಐಈ ಎಂದು ಟೈಪ್ ಮಾಡಿ ಒಂದು ಸ್ಪೇಸ್ ಬಿಟ್ಟು ತಮ್ಮ ಸರಿಯಾದ ಎಪಿಕ್ ಸಂಖ್ಯೆಯನ್ನು ನಮೂದಿಸಿ 9212357123 ಸಂಖ್ಯೆಗೆ ಎಸ್‌ಎಂಎಸ್ ಕಳುಹಿಸಬೇಕು.
ಇದೇ ಮಾದರಿಯಲ್ಲಿ ಆಧಾರ್ ಸಂಖ್ಯೆಯನ್ನು ಕಳುಹಿಸಲು ಖಈ್ಖಐಉ ಎಂದು ಟೈಪ್ ಮಾಡಿ ಸ್ಪೇಸ್ ಬಿಟ್ಟು ಸಂಖ್ಯೆ ನಮೂದಿಸಿ ಅದೇ ಮೊಬೈಲ್ ಸಂಖ್ಯೆಗೆ ಎಸ್‌ಎಂಎಸ್ ಕಳುಹಿಸುವುದು. (ಉದಾ ಖಈ್ಖಐಉ 4501 1217 2137)
ಹೀಗೆ ಮತದಾರರ ಚೀಟಿ, ಮೊಬೈಲ್ ಸಂಖ್ಯೆ, ಆಧಾರ್ ಸಂಖ್ಯೆಯನ್ನು ರೇಷನ್‌ಕಾರ್ಡ್ ಸಂಖ್ಯೆಯೊಂದಿಗೆ ತಾಳೆ ನೋಡಿ ನೈಜತೆಯನ್ನು ದೃಢೀಕರಿಸಲಾಗುವುದು. ಒಂದೊಮ್ಮೆ ಈ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳದ ಪಡಿತರ ಚೀಟಿಗಳನ್ನು ಸಂಶಯಾಸ್ಪದವೆಂದು ಪರಿಗಣಿಸಿ ತನಿಖೆಗೆ ಕಾಯ್ದಿರಿಸಲಾಗುವುದು.
ಈ ಹಿನ್ನೆಲೆಯಲ್ಲಿ ನಗರ ಭಾಗದ ಎಲ್ಲಾ ಪಡಿತರ ಚೀಟಿದಾರರು ಜೂನ್ 30ರೊಳಗೆ ಕಡ್ಡಾಯವಾಗಿ ಪಡಿತರ, ಮತದಾರರ ಹಾಗೂ ಆಧಾರ್ ಸಂಖ್ಯೆಯನ್ನು ಎಸ್‌ಎಂಎಸ್ ಮಾಡುವ ಮೂಲಕ ತಮ್ಮ ಪಡಿತರ ಚೀಟಿಯನ್ನು ನವೀಕರಿಸಿಕೊಳ್ಳಬೇಕು. ಅಲ್ಲದೆ, ಒಂದೇ ಕುಟುಂಬದಲ್ಲಿನ ಒಂದಕ್ಕಿಂತ ಹೆಚ್ಚು ಬಿಪಿಎಲ್ ರೇಷನ್ ಕಾರ್ಡ್ ಹೊಂದಿದ್ದಲ್ಲಿ ಅಂತಹವರು ಸ್ವಯಂ ಪ್ರೇರಿತರಾಗಿ ಹೆಚ್ಚುವರಿ ಕಾರ್ಡುಗಳನ್ನು ರದ್ದುಪಡಿಸಿಕೊಳ್ಳಬೇಕು. ಇಲ್ಲವಾದಲ್ಲಿ ಅಂಥವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಶಿವಮೊಗ್ಗ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಹಿರಿಯ ಉಪನಿರ್ದೇಶಕರು ತಿಳಿಸಿದ್ದಾರೆ.