ಬಸ್ ನಿಲ್ದಾಣ: ಜಾಗ ಹಸ್ತಾಂತರ ಪ್ರಕ್ರಿಯೆ ಮಾತ್ರ ಬಾಕಿ
ಆಯನೂರು: ಪಟ್ಟಣದಲ್ಲಿ ಸುಸಜ್ಜಿತ ಬಸ್ ನಿಲ್ದಾಣಕ್ಕೆ ಎಲ್ಲಾ ತಯಾರಿ ನಡೆದಿದ್ದು, ಕೆಎಸ್‌ಆಟ್‌ಟಿಸಿಗೆ ಜಾಗ ಹಸ್ತಾಂತರಿಸುವ ಪ್ರಕ್ರಿಯೆ ಬಾಕಿ ಇದೆ ಎಂದು ರಾಜ್ಯಸಭಾ ಸದಸ್ಯ ಆಯನೂರು ಮಂಜುನಾಥ್ ಹೇಳಿದರು.
ಇಲ್ಲಿನ ಶುದ್ಧ ಕುಡಿವ ನೀರಿನ ಘಟಕಕ್ಕೆ ಚಾಲನೆ ನೀಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಆಯನೂರು ಅಭಿವೃದ್ಧಿ ಕಾರ್ಯಗಳ ಕುರಿತಂತೆ ಮಾಹಿತಿ ನೀಡಿದರು.
ಆಯನೂರು ಗ್ರಾಮ ಪಂಚಾಯಿತಿ ಕಟ್ಟಡ ಪಕ್ಕದಲ್ಲಿರುವ ಲೋಕೋಪಯೋಗಿ ಇಲಾಖೆ ಪ್ರವಾಸಿ ಮಂದಿರ ಇರುವ ವಿಶಾಲ ಜಾಗದಲ್ಲಿ ಬಸ್ ನಿಲ್ದಾಣ ನಿರ್ಮಿಸಬೇಕೆಂಬುದು ಉದ್ದೇಶ. ಈ ಕಾರಣಕ್ಕಾಗಿಯೇ ಬಿಜೆಪಿ ಸರ್ಕಾರದ ಅವಧಿಯಲ್ಲಿ ಲೋಕೋಪಯೋಗಿ ಇಲಾಖೆಯ ಪ್ರವಾಸಿ ಮಂದಿರವನ್ನು ಊರಿನ ಹೊರಗೆ ಸ್ಥಳಾಂತರಿಸಿ, ನಿರ್ಮಿಸಲು ಹಣವೂ ಮಂಜೂರಾಗಿದ್ದು, ಟೆಂಡರ್ ಪ್ರಕ್ರಿಯೆ ಸಹ ನಡೆದಿದೆ. ಸದ್ಯವೇ ಕಾಮಗಾರಿ ಆರಂಭವಾಗಲಿದೆ ಎಂದು ಹೇಳಿದರು.
ಗ್ರಾಪಂ ಅಧ್ಯಕ್ಷೆ ಭಾಗ್ಯ, ಉಪಾಧ್ಯಕ್ಷ ಜಯರಾಮನಾಯ್ಕ್, ಜಿಪಂ ಸದಸ್ಯೆ ಪ್ರೇಮ, ಎಪಿಎಂಸಿ ಅಧ್ಯಕ್ಷ ಷಣ್ಮುಖಪ್ಪ, ಗ್ರಾಪಂ ಸದಸ್ಯರು ಇದ್ದರು.