'ಕ್ಷೇತ್ರಗಳತ್ತ ಗಮನ ನೀಡಿ'
ಶಿವಮೊಗ್ಗ: ಸಮಾಜದಲ್ಲಿ ಸಮಸ್ಯೆಗಳಿವೆ ಎಂಬುದನ್ನು ಗಮನಿಸಬೇಕು. ಪಕ್ಷದ ವ್ಯಾಪ್ತಿಯಲ್ಲಿ ಕೇಂದ್ರೀಕೃತವಾಗಿ ಕೆಲಸ ಮಾಡಬೇಕು ಎಂದು ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎಸ್. ದತ್ತಾತ್ರಿ ಯುವಮೋರ್ಚಾ ಕಾರ್ಯಕರ್ತರಿಗೆ ಕರೆ ನೀಡಿದರು. ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಕಾರ್ಯಕಾರಿಣಿಯಲ್ಲಿ ಮಾತನಾಡಿ, ಸಂಘಟಿತ ಪ್ರಯತ್ನದಿಂದ ಬಿಜೆಪಿಗೆ ಅಧಿಕಾರ ಸಿಕ್ಕಿದೆ. ಕಾರ್ಯಕರ್ತರು ತಮ್ಮ ತಮ್ಮ ಕ್ಷೇತ್ರಗಳಲ್ಲಿ ಆಗಬೇಕಾಗಿರುವ ಕೆಲಸಗಳ ಕಡೆಗೆ ಗಮನ ಹರಿಸಬೇಕಾಗಿದೆ ಎಂದರು. ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಮತ್ತು ಯುವ ಮೋರ್ಚಾ ಪ್ರಭಾರಿ ಡಿ.ಎಸ್.ಅರುಣ್, ಚಂದ್ರಶೇಖರ್, ಯುವಮೋರ್ಚಾ ಜಿಲ್ಲಾಧ್ಯಕ್ಷ ಭವಾನಿರಾವ್ ಮೋರೆ, ಹೃಷಿಕೇಶ್, ಚಿದಾನಂದ ಮತ್ತಿತರರು ಇದ್ದರು.
ಮಹಿಳಾ ಮೋರ್ಚಾ ಸಭೆ
ಶಿವಮೊಗ್ಗ: ಚುನಾವಣೆ ಸಂದರ್ಭದಲ್ಲಿ ಮತಯಾಚನೆ ಮಾಡಲು ಮಾತ್ರವೇ ಮಹಿಳೆಯರನ್ನು ಸೀಮಿತ ಮಾಡಲಾಗುವುದಿಲ್ಲ. ಮಹಿಳೆಯರಿಗೆ ಹೆಚ್ಚಿನ ಅಧಿಕಾರ ನೀಡುವ ಕಡೆಗೆ ಬಿಜೆಪಿ ಈಗಾಗಲೇ ಹೆಜ್ಜೆ ಇಟ್ಟಿದೆ. ನರೇಂದ್ರ ಮೋದಿ ಅವರು ತಮ್ಮ ಸಂಪುಟದಲ್ಲಿ 7 ಮಹಿಳೆಯರಿಗೆ ಸಚಿವ ಸ್ಥಾನ ನೀಡಿದ್ದಾರೆ. ಅದಕ್ಕಿಂತಲೂ ಹೆಚ್ಚಿನ ಶಕ್ತಿಯನ್ನು ಮಹಿಳೆಯರು ಬೆಳೆಸಿಕೊಳ್ಳಬೇಕಾಗಿದೆ ಎಂದು ಬಿಜೆಪಿ ಮಹಿಳಾ ಮೋರ್ಚಾ ರಾಜ್ಯ ಕಾರ್ಯದರ್ಶಿ ಆರ್.ಎಸ್.ಶೋಭ ಕರೆ ನೀಡಿದ್ದಾರೆ. ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ಮಹಿಳಾ ಮೋರ್ಚಾ ಜಿಲ್ಲಾ ಸಮಿತಿ ಸಭೆ ಉದ್ಘಾಟಿಸಿ ಅವರು ಮಾತನಾಡಿದರು. ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಶರಾವತಿ ಸಿ.ರಾವ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಪಂ ಮಾಜಿ ಅಧ್ಯಕ್ಷೆ ಶುಭಾ ಕೃಷ್ಣಮೂರ್ತಿ, ಗೀತಾ ಮಲ್ಲಿಕಾರ್ಜುನ, ಪದ್ಮಿನಿ, ಗಾಯತ್ರಿದೇವಿ, ಅನಿತಾ, ಸುನಿತಾ, ವಿದ್ಯಾ ಲಕ್ಷ್ಮೀಪತಿ ಮತ್ತಿತರರು ಇದ್ದರು.