ಮಹಿಳೆಯರಿಂದ ಅರ್ಜಿ ಆಹ್ವಾನ
ಶಿವಮೊಗ್ಗ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ 2014-15ನೇ ಸಾಲಿನಲ್ಲಿ ಉದ್ಯೋಗಿನಿ ಯೋಜನೆಯಡಿ ವ್ಯಾಪಾರ, ಸೇವಾ ಹಾಗೂ ಗುಡಿ ಕೈಗಾರಿಕೆ ಇತ್ಯಾದಿ ಆದಾಯೋತ್ಪನ್ನ ಚಟುವಟಿಕೆಗಳಲ್ಲಿ ತೊಡಗುವ ಮಹಿಳೆಯರಿಗೆ ಆರ್ಥಿಕ ಸಹಾಯ ನೀಡಲು ಉದ್ಧೇಶಿಸಿದ್ದು, ಆರ್ಥಿಕವಾಗಿ ಹಿಂದುಳಿದ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಆರ್ಥಿಕ ಸಹಾಯ ಪಡೆಯಲಿಚ್ಚಿಸುವ ಮಹಿಳೆಯರು 45 ವರ್ಷ ವಯೋವುತಿಯೊಳಗಿನವರಾಗಿದ್ದು, ಕುಟುಂಬದ ವಾರ್ಷಿಕ ಆದಾಯ ರು. 40 ಸಾವಿರ ಮೀರಿರಬಾರದು. ಆಸಕ್ತರು ನಿಗದಿತ ನಮೂನೆಯ ಅರ್ಜಿಯನ್ನು ಆಯಾ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿಯಿಂದ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಜುಲೈ 7ರೊಳಗಾಗಿ ಸಲ್ಲಿಸಬೇಕು. ಹೆಚ್ಚಿನ ವಿವರಗಳಿಗಾಗಿ 08182-249034 ಸಂಪರ್ಕಿಸಬಹುದು.