ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
ಶಿವಮೊಗ್ಗ: ಜಿಲ್ಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಮತೀಯ ಅಲ್ಪಸಂಖ್ಯಾತರ ವರ್ಗಕ್ಕೆ ಸೇರಿದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ದ ಹಾಗೂ ಪಾರ್ಸಿ ಜನಾಂಗದ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಮುಂದುವರೆಸಲು ಉತ್ತೇಜಿಸುವ ದೃಷ್ಟಿಯಿಂದ ಪ್ರೋತ್ಸಾಹಧನ ನೀಡಲಾಗುತ್ತಿದೆ. ಸಾಲಿನಲ್ಲಿ ಪ್ರಥಮ ಪಿಯುಸಿ ಹಾಗೂ ದ್ವಿತೀಯ ಪಿಯುಸಿ ಯಲ್ಲಿ 2014-15ನೇ ಸಾಲಿನಲ್ಲಿ ಪದವಿ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು (ಬಿ.ಎ., ಬಿ.ಎಸ್ಸಿ., ಬಿ.ಕಾಂ., ಬಿ.ಬಿ.ಎಂ., ಬಿ.ಸಿ.ಎ., ಕೋರ್ಸುಗಳು ಮಾತ್ರ ವೃತ್ತಿಪರ ಕೋರ್ಸುಗಳು ಹೊರತು ಪಡಿಸಿ) ಪದವಿ ಕೋರ್ಸುಗಳಲ್ಲಿ ಉತ್ತೀರ್ಣರಾಗಿ ಸ್ನಾತಕೋತ್ತರ ಪದವಿಯ ಪ್ರಥಮ ಹಾಗೂ ದ್ವಿತೀಯ ವರ್ಷದ ಪ್ರವೇಶ ಪಡೆದು ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ,
ಲೋಕಾಯುಕ್ತ ನ್ಯಾ.ಭಾಸ್ಕರ್ರಾವ್ ಪ್ರವಾಸ ಇಂದು
ಶಿವಮೊಗ್ಗ: ಲೋಕಾಯುಕ್ತ ನ್ಯಾಯಮೂರ್ತಿ ಡಾ. ವೈ. ಭಾಸ್ಕರ್ರಾವ್ ಅವರು ಜೂನ್ 22ರಂದು ಸಂಜೆ 7ಗಂಟೆಗೆ ಶಿವಮೊಗ್ಗಕ್ಕೆ ಆಗಮಿಸಿ ವಾಸ್ತವ್ಯ ಮಾಡುವರು. ಜೂನ್ 23ರಂದು ಬೆಳಿಗ್ಗೆ 10.30ಕ್ಕೆ ನಗರದ ಕುವೆಂಪು ರಂಗಮಂದಿರದಲ್ಲಿ ಬಾಕಿಯಿರುವ ಪ್ರಕರಣಗಳ ಬಗ್ಗೆ ಕಡತಗಳನ್ನು ಪರಿಶೀಲಿಸುವರು. ನಂತರ ಅವರು ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸುವರು. 6 ಗಂಟೆಗೆ ಶಿವಮೊಗ್ಗದಿಂದ ಚಿಕ್ಕಮಗಳೂರಿಗೆ ಪ್ರಯಾಣ ಬೆಳೆಸುವರು.
ಅರ್ಜಿ ಆಹ್ವಾನ: ಸಾರಿಗೆ ಇಲಾಖೆಯು ಪರಿಶಿಷ್ಟ ಜಾತಿಯ ವಿದ್ಯಾವಂತ ನಿರುದ್ಯೋಗಿ ಯುವಕರಿಗೆ ವಾಹನ ಚಾಲನಾ ತರಬೇತಿ ನೀಡಲು ಉದ್ದೇಶಿಸಿದ್ದು, ಆಸಕ್ತರು ನಿಗಧಿತ ನಮೂನೆಯ ಅರ್ಜಿಯನ್ನು ಭರ್ತಿಮಾಡಿ ಅಗತ್ಯ ದಾಖಲೆಗಳೊಂದಿಗೆ ಜುಲೈ 15ರೊಳಗಾಗಿ ಸಲ್ಲಿಸುವಂತೆ ಪ್ರಾದೇಶಿಕ ಸಾರಿಗೆ ಅಧಿಕಾರಿ ತಿಳಿಸಿದ್ದಾರೆ.