ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

'ವಿದ್ಯಾರ್ಥಿಗಳ ದೃಢ ಸಂಕಲ್ಪದಿಂದ ಉತ್ತಮ ಸಮಾಜ ನಿರ್ಮಾಣ ಸಾಧ್ಯ'

Rashmi Kasaragodu
Updated On : 23 Jun 2014, 10:49 am

ಶಿಕಾರಿಪುರ: ವಿದ್ಯಾರ್ಥಿಗಳ ದೃಢ ಸಂಕಲ್ಪದಿಂದ ಮಾತ್ರ ಸದೃಢ ಸಮಾಜ ನಿರ್ಮಾಣ ಸಾಧ್ಯ ಎಂದು ತಾಲೂಕಿನ ಸಾಲೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಚಂದ್ರಪ್ಪ ತಿಳಿಸಿದರು. ತಾಲೂಕಿನ ಸಾಲೂರು ಪ್ರೌಡ ಶಾಲೆ ಆಶ್ರಯದಲ್ಲಿ ಗ್ರಾಮ ನೈರ್ಮಲ್ಯ ಸಮಿತಿಯಿಂದ ಮಲೇರಿಯಾ ವಿರೋಧಿ ಮಾಸಾಚರಣೆ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಮಲೇರಿಯಾ ಆಧುನಿಕ ಸಮಾಜದಲ್ಲಿ ಬಹು ದೊಡ್ಡ ಸಮಸ್ಯೆಯಾಗಿ ಕಾಡುತ್ತಿದ್ದು ಆರೋಗ್ಯ ಇಲಾಖೆ ಮಲೇರಿಯಾ ಸಂಪೂರ್ಣ ನಿಯಂತ್ರಣಕ್ಕಾಗಿ ಹೆಚ್ಚಿನ ಶ್ರಮವಹಿಸಿದೆ ಎಂದರು.
  ಮಲೇರಿಯಾ ಸಂಪೂರ್ಣ ನಿಯಂತ್ರಣಕ್ಕಾಗಿ ಹಲವು ಕಾರ್ಯಕ್ರಮಗಳನ್ನು ಆಯೋಜಿಸಿ ಮುಂಜಾಗ್ರತಾ ಕ್ರಮದ ಬಗ್ಗೆ ಜನರಿಗೆ ಮಾಹಿತಿ ಹಾಗೂ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಎಚ್ಚರಿಕೆ ನೀಡುತ್ತಿದ್ದರೂ ಮಲೇರಿಯಾ ನಿಯಂತ್ರಣದಲ್ಲಿ ನಿರೀಕ್ಷಿಸಿದ ಪ್ರಗತಿ ಸಾಧಿಸಲು ಸಾಧ್ಯವಾಗಿಲ್ಲ ಎಂದು ಅಸಹಾಯಕತೆ ವ್ಯಕ್ತಪಡಿಸಿದರು.
  ಆರೋಗ್ಯ ಸಹಾಯಕಿ ವಿ.ಜಯಮ್ಮಆರೋಗ್ಯ ಸಹಾಯಕ ಎನ್.ವಿ. ಸುರೇಶ್ ಸಹಶಿಕ್ಷಕಿ ಗಿರಿಜಾ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಕ ಅಶೋಕ್, ಗೋಪಾಲ, ಶಬಾನಾ ಮತ್ತಿತರರು ಹಾಜರಿದ್ದರು. ಚಂದನ ಪ್ರಾರ್ಥಿಸಿ ಆಶಾ ಕಾರ್ಯಕರ್ತೆ ವನಿತಾ ಸ್ವಾಗತಿಸಿದರು. ಪೂಜಾ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement