ಶಿವಮೊಗ್ಗ

ಯುವಕರಿಂದಲೇ ರಸ್ತೆ ದುರಸ್ತಿ

ಸಾಗರ: ಸಾಗರದಿಂದ ದೀವಗದ್ದೆಗೆ ತೆರಳುವ ಸಂಪರ್ಕ ರಸ್ತೆಯನ್ನು ಸ್ಥಳಿಯ ಯುವಕರೇ ದುರಸ್ತಿಗೊಳಿಸಿ ಇತರರಿಗೆ ಮಾದರಿಯಾಗಿದ್ದಾರೆ.
ಸಾಗರದಿಂದ ದೀವಗದ್ದೆಗೆ ತೆರಳುವ ಸಂಪರ್ಕ ರಸ್ತೆ ಸಂಪೂರ್ಣ ಶಿಥಿಲಗೊಂಡು ವರ್ಷಗಳೇ ಕಳೆದಿತ್ತು. ಈ ಬಗ್ಗೆ ಗ್ರಾಮಸ್ಥರು ಸಂಬಂಧಿಸಿದವರಿಗೆ ಸಾಕಷ್ಟು ಬಾರಿ ಮನವಿ ಸಲ್ಲಿಸಿದ್ದರೂ ಯಾವುದೇ ಪ್ರಯೋಜನವಾಗಿರಲಿಲ್ಲ.
ಇದನ್ನು ಮನಗಂಡ ಸ್ಥಳೀಯ ನವಚೇತನ ವೇದಿಕೆಯ ಸ್ಥಾಪಕ ಪ್ರಶಾಂತ್ ಅವರು ವೇದಿಕೆಯ ಸಂಚಾಲಕ ಲಿಂಗರಾಜು ಹಾಗೂ ಸದಸ್ಯ ಹರೀಶ್, ಹಾಲಪ್ಪ, ಕೃಷ್ಣಪ್ಪ, ಸುರೇಶ್, ಕಮಲಾಕರ್, ರಾಘವೇಂದ್ರ, ಬಸವರಾಜ್ ಅವರೊಂದಿಗೆ ಸಮಾಲೋಚನೆ ನಡೆಸಿ ದುರಸ್ತಿ ಕಾಮಗಾರಿ ಕೈಗೆತ್ತಿಕೊಂಡು ತಮ್ಮ ಕಾರ್ಯದಲ್ಲಿ ಯಶಸ್ಸು  ಸಾಧಿಸಿ ಗ್ರಾಮಸ್ಥರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ಈ ಕುರಿತು ಪ್ರಶಾಂತ್ ಪ್ರತಿಕ್ರಿಯೆ ನೀಡಿ, ನವಚೇತನ ವೇದಿಕೆ ಈಗಾಗಲೇ ಸಾಗರ, ಹೊಸನಗರದ ಗ್ರಾಮೀಣ ಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಯುವಕರನ್ನು ಒಗ್ಗೂಡಿಸಿ ಸಮಾಜದ ವಿವಿಧ ಸ್ತರಗಳಲ್ಲಿರುವ ಸಮಸ್ಯೆ  ಗುರುತಿಸಿ ನಮ್ಮಿಂದಾದ ಸಹಾಯವನ್ನು ಮಾಡುತ್ತಿದ್ದೇವೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಿಎಂ ವಿಚಾರ ಪ್ರಶ್ನಿಸಲು ನೀವು ಯಾರು? ಕಾಂಗ್ರೆಸ್ ಆಂತರಿಕ ವಿಚಾರದಲ್ಲಿ ಮೂಗು ತೂರಿಸುವ ಬದಲು ನಿಮ್ಮ ಕೆಲಸ ನೋಡಿಕೊಳ್ಳಿ: HDKಗೆ ಸಚಿವ ಚಲುವರಾಯಸ್ವಾಮಿ ತಿರುಗೇಟು

729 ಕೋಟಿ ರೂ. ವೆಚ್ಚದಲ್ಲಿ ಮೈಸೂರು ಫಿಲ್ಮ್ ಸಿಟಿ ನಿರ್ಮಾಣಕ್ಕೆ ಸಚಿವ ಸಂಪುಟ ಅನುಮೋದನೆ

ಕಬ್ಬು ಬೆಳೆಗಾರರೇ ತಾಳ್ಮೆಯಿಂದಿರಿ, ಸಮಸ್ಯೆ ಬಗೆಹರಿಸುವೆ: ಸಿಎಂ ಡಿಕೆ ಶಿವಕುಮಾರ್ ಭರವಸೆ

ಕರಾವಳಿಯಿಲ್ಲದೆ ಕರ್ನಾಟಕವಿಲ್ಲ, ಮಂಗಳೂರು ನಮ್ಮ ರಾಜ್ಯ ಹೆಮ್ಮೆ: ಸಿಎಂ ಡಿಕೆ ಶಿವಕುಮಾರ್

ಸ್ಟಿಂಗ್ ವಿಡಿಯೋ ಕೇಸ್‌: ತನಿಖೆಯಲ್ಲಿ ಯಾರ ಬಂಧನವಾಗಿದೆ ಮಾಹಿತಿ ಇಲ್ಲ: ಡಿಕೆ ಶಿವಕುಮಾರ್