ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ವಿಐಎಸ್‌ಎಲ್, ಎಂಪಿಎಂ ಕಾರ್ಖಾನೆಗಳ ಅಭಿವೃದ್ಧಿಗೆ ಶಕ್ತಿಮೀರಿ ಪ್ರಯತ್ನ: ಬಿಎಸ್‌ವೈ

Srinivasa Murthy VN
Updated On : 1 Jul 2014, 12:13 pm

ಭದ್ರಾವತಿ: ಲೋಕಸಭಾ ಚುನಾವಣೆಯಲ್ಲಿ ಅತ್ಯಧಿಕ ಮತಗಳ ಅಂತರದಿಂದ ಜಯಗಳಿಸಿ ಯಡಿಯೂರಪ್ಪ ದಕ್ಷಿಣ ಭಾರತದಲ್ಲಿಯೇ ದಾಖಲೆ ಸಾಧಿಸಿದ್ದಾರೆ. ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಹಾಗೂ ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನದಾಗಿ ಶ್ರಮಿಸಿದ್ದೇ ಇದಕ್ಕೆ ಕಾರಣ ಎಂದು ಕೇಂದ್ರ ವಿಮಾನಯಾನ ಖಾತೆ ರಾಜ್ಯ ಸಚಿವ ಜಿ.ಎಂ.ಸಿದ್ದೇಶ್ವರ ಹೇಳಿದರು.
ತಾಲೂಕು ವೀರಶೈವ ಸಮಾಜ, ಹಳೇನಗರದ ವೀರಶೈವ ಸೇವಾ ಸಮಿತಿ, ಅಖಿಲ ಭಾರತ ವೀರಶೈವ ಸಮಾಜ ಘಟಕ ಹಾಗೂ ಜಂಗಮ ಸಮಾಜದ ಭದ್ರಾವತಿ ಘಟಕ ಸಂಯುಕ್ತವಾಗಿ ವೀರಶೈವ ಸಭಾಭವನದಲ್ಲಿ ಸೋಮವಾರ ಏರ್ಪಡಿಸಿದ್ದ ಬಸವ ಜಯಂತ್ಯುತ್ಸವ ಹಾಗೂ ನೂತನ ಸಂಸದ ಮತ್ತು ಮಂತ್ರಿಗಳಿಗೆ ಸನ್ಮಾನ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿ, ತಾವು ಕೇಂದ್ರ ಸಚಿವರಾಗಲು ಸಹ ಯಡಿಯೂರಪ್ಪನವರ ಪ್ರಭಾವವೇ ಕಾರಣ ಎಂದರು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಶಿವಮೊಗ್ಗ ಸಂಸದ ಯಡಿಯೂರಪ್ಪ ಭದ್ರಾವತಿಯ ವಿಐಎಸ್‌ಎಲ್ ಹಾಗೂ ಎಂಪಿಎಂ ಕಾರ್ಖಾನೆ ಅಭಿವೃದ್ಧಿಗೆ ಶಕ್ತಿಮೀರಿ ಯತ್ನಿಸುತ್ತೇನೆಂದರು. ಭದ್ರಾವತಿ ಆಕಾಶವಾಣಿ ಎಫ್‌ಎಂ ವಾಹಿನಿಯ ಸಾಮರ್ಥ್ಯ ಹೆಚ್ಚಿಸಲು ಹಾಗೂ ಶಿವಮೊಗ್ಗದಿಂದ ಬೆಂಗಳೂರಿಗೆ ರಾತ್ರಿ ಮತ್ತೊಂದು ರೈಲು ಸಂಚಾರಕ್ಕೆ ಸಹ ಕೇಂದ್ರ ರೇಲ್ವೆ ಸಚಿವರನ್ನು ಒತ್ತಾಯಿಸಿದ್ದೇನೆ ಎಂದು ಹೇಳಿದರು.
ಮಾಜಿ ಶಾಸಕ ಬಿ.ಕೆ.ಸಂಗಮೇಶ್ವರ್ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಸಾಣೇಹಳ್ಳಿ ತರಳಬಾಳು  ಶಾಖಾ ಮಠದ ಡಾ. ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹಾಗೂ ಬಿಳಕಿ ರಂಭಾಪುರಿ ಶಾಖಾ ಹಿರೇಮಠದ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿ ಸಾನಿಧ್ಯ ವಹಿಸಿದ್ದರು. ಕೈಗಾರಿಕೋದ್ಯಮಿ ಎಸ್.ರುದ್ರೇಗೌಡ ಹಾಗೂ ಜಿಪಂ ಸದಸ್ಯ ಎಚ್.ಎಲ್.ಷಡಾಕ್ಷರಿ ಮುಖ್ಯ ಅತಿಥಿಗಳಾಗಿದ್ದರು. ಜಂಗಮ ಸಮಾಜ ಅಧ್ಯಕ್ಷ ಎಸ್.ಅಡವೀಶಯ್ಯ, ಅಖಿಲ ಭಾರತ ವೀರಶೈವ ಮಹಾಸಭಾ ಭದ್ರಾವತಿ ಘಟಕ ಅಧ್ಯಕ್ಷ ಸಿದ್ದಲಿಂಗಯ್ಯ, ವೀರಶೈವ ಸೇವಾ ಸಮಿತಿ ಅಧ್ಯಕ್ಷ ಆರ್.ಮಹೇಶ್‌ಕುಮಾರ್, ಮಲ್ಲೇಶ್ವರ ಸಮುದಾಯ ಭವನದ ಅಧ್ಯಕ್ಷ ಎಚ್.ವಿ.ಶಿವರುದ್ರಪ್ಪ ಶಿವ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷ ಜಿ.ಎಸ್.ಸತೀಶ್, ಸಹಕಾರ ಸಂಘದ ಅಧ್ಯಕ್ಷ ಡಾ. ಜಿ.ಎಂ.ನಟರಾಜ್, ತರಳಬಾಳು ಯುವವೇದಿಕೆಯ ಅಧ್ಯಕ್ಷ ಡಿ.ಶಂಕರಮೂರ್ತಿ ಉಪಸ್ಥಿತರಿದ್ದರು. ಶಾಶ್ವತಿ ಮಹಿಳಾ ಸಮಾಜ ಸದಸ್ಯರಿಂದ ವಚನ ಗಾಯನ ನಡೆಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement