ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ಕಷ್ಟಪಟ್ಟರೆ ಉತ್ತಮ ಭವಿಷ್ಯ

Rashmi Kasaragodu
Updated On : 3 Mar 2014, 11:19 am

ಕ.ಪ್ರ.ವಾರ್ತೆ    ಶಿವಮೊಗ್ಗ    ಮಾ. 2
ಭವಿಷ್ಯ ರೂಪಿಸಿಕೊಳ್ಳುವಲ್ಲಿ ಎಸ್ಸೆಸ್ಸೆಲ್ಸಿ ಪ್ರಥಮ ಘಟ್ಟವಾಗಿದೆ. ಇಲ್ಲಿ ವಿದ್ಯಾರ್ಥಿಗಳು ಕಷ್ಟಪಟ್ಟು ಓದಿನತ್ತ ಆಸಕ್ತಿ ವಹಿಸಿ ಒಳ್ಳೆಯ ಅಂಕ ಸಂಪಾದಿಸಿದರೆ ಮುಂದೆ ಒಳ್ಳೆಯ ಅವಕಾಶ ನಿಮ್ಮದಾಗುತ್ತದೆ ಎಂದು ಶಾಸಕ ಕೆ.ಬಿ.ಪ್ರಸನ್ನಕುಮಾರ್ ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಕಮಲಾ ನೆಹರು ಮಹಿಳಾ ಕಾಲೇಜು ಕುವೆಂಪು ಸಭಾಂಗಣದಲ್ಲಿ ಭಾನುವಾರ ಅಂಬೇಡ್ಕರ್ ಗ್ರಾಮೀಣಾಭಿವೃದ್ಧಿ ಸಂಸ್ಥೆ, ದಲಿತ ಸಂಘರ್ಷ ಸಮಿತಿ, ಲೈಫ್ ಶಿಕ್ಷಣ ಸಂಸ್ಥೆ ಆಶ್ರಯದಲ್ಲಿ ಪರಿಶಿಷ್ಟ ಜಾತಿ, ವರ್ಗದ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ವ್ಯಕ್ತಿತ್ವ ವಿಕಸನ ಶಿಬಿರ ಉದ್ಘಾಟಿಸಿ ಮಾತನಾಡಿದರು.
ವಿದ್ಯಾರ್ಥಿಗಳೇ ದೇಶದ ಮುಂದಿನ ಆಸ್ತಿ. ಸಮಾಜ ಹಾಗೂ ಕುಟುಂಬ ನಿಮ್ಮ ಭವಿಷ್ಯವನ್ನು ಕಾದು ನೋಡುತ್ತಿದೆ. ಹೀಗಾಗಿ ಸಮಯಕ್ಕೆ ಪ್ರಾಶಸ್ತ್ಯ ನೀಡಿ, ಅವಕಾಶ ಸದುಪಯೋಗಪಡಿಸಿಕೊಂಡು ಉತ್ತಮ ಜೀವನ ರೂಪಿಸಿಕೊಳ್ಳಬೇಕೆಂದು ಸಲಹೆ ನೀಡಿದ ಅವರು, ವಿದ್ಯಾರ್ಥಿಗಳು ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳುವ ಮೂಲಕ ದೇಶ ಹಾಗೂ ಸಮಾಜದ ಆಸ್ತಿಯಾಗಬೇಕೆಂದು ಕರೆ ನೀಡಿದರು.
ಅತ್ಯಮೂಲ್ಯ: ವಿದ್ಯಾರ್ಥಿ ಜೀವನ ಅತ್ಯಮೂಲ್ಯ ಎಂಬುದರ ಜತೆಗೆ ಮುಂದಿನ ಜೀವನ ಕೂಡ ಹಸನಾಗಿರಬೇಕು. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಯೋಚಿಸಬೇಕೆಂದು ಕರೆ ನೀಡಿದರಲ್ಲದೆ, ಮುಂದೆ ಯಾವುದೇ ಹುದ್ದೆ ಸಂಪಾದಿಸಿದರು ಸಮಾಜಕ್ಕೆ ಸೇವೆ ಮಾಡುವ ಮನೋಭಾವ ಬೆಳೆಸಿಕೊಳ್ಳಬೇಕೆಂದು ಹೇಳಿದರು.
ಉತ್ತಮ ಭವಿಷ್ಯ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಸಿಕಾಂತ್ ಸೆಂಥಿಲ್ ಮಾತನಾಡಿ, ಸಮಾಜದಲ್ಲಿ ಬದಲಾವಣೆ ತರಬೇಕು ಎಂದರೆ ಧನಾತ್ಮಕವಾಗಿ ಹೆಜ್ಜೆ ಇಡಬೇಕು ಎಂದರು.
ಎಂ. ಗುರುಮೂರ್ತಿ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಬಾಲರಾಜ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಬಸವರಾಜ್, ತಾಲೂಕು ಸಮಾಜ ಕಲ್ಯಾಣಾಧಿಕಾರಿ ಶ್ರೀನಿವಾಸ್, ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಹಾಲೇಶಪ್ಪ ಮತ್ತಿತರರು ಇದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement