ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆ
ಚಿಕ್ಕಮಗಳೂರು: ಸರ್ಕಾರಿ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ಅಧಿಕಾರಿಗಳ ಹಾಗೂ ಸಾರ್ವಜನಿಕರ ಜವಾಬ್ದಾರಿ ಪ್ರಮುಖವಾಗಿದೆ ಎಂದು ಜಿಪಂ ಸದಸ್ಯ ಮಹಮ್ಮದ್ ಇಫ್ತೆಖಾರ್ ಆದಿಲ್ ಹೇಳಿದರು.
ಸಮೀಪದ ಮಾಗುಂಡಿ ಸರ್ಕಾರಿ ಪ್ರೌಢಶಾಲೆಯಲ್ಲಿ ಎಂಟನೇ ತರಗತಿ ಮಕ್ಕಳಿಗೆ ಸೈಕಲ್ ವಿತರಣೆ ಮಾಡಿ ಮಾತನಾಡಿ, ಶಿಕ್ಷಣಕ್ಕಾಗಿ ಸರ್ಕಾರವೂ ಕೋಟ್ಯಂತರ ರು. ಬಿಡುಗಡೆ ಮಾಡಿದ್ದು, ವಿದ್ಯಾರ್ಥಿವೇತನ ಹಾಗೂ ಇನ್ನಿತರೆ ಸೌಲಭ್ಯ ಸದುಪಯೋಗಪಡಿಸಿಕೊಂಡು ಗ್ರಾಮೀಣ ಜನತೆಗೆ ಸರ್ಕಾರಿ ಯೋಜನೆಗಳ ಮಾಹಿತಿ ನೀಡುವಲ್ಲಿ ಶಿಕ್ಷಕರು ಮುಂದಾಗಬೇಕೆಂದು ತಿಳಿಸಿದರು.
ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಎಂ.ಎಲ್. ರಘು ಅಧ್ಯಕ್ಷತೆ ವಹಿಸಿದ್ದರು. ಮಾಗುಂಡಿ ಗ್ರಾಪಂ ಅಧ್ಯಕ್ಷ ಮೋಹನ್, ವೈದ್ಯಾಧಿಕಾರಿ ರುಮೈತ, ಮುಖ್ಯ ಶಿಕ್ಷಕಿ ಆರ್.ಪಿ. ಚೇತನಾ ಉಪಸ್ಥಿತರಿದ್ದರು.