ಸಾಹಿತ್ಯ ಸಂಭ್ರಮ ಕಾರ್ಯಕ್ರಮ
ಚಿಕ್ಕಮಗಳೂರು: ಗಾಂಧಿ ಗ್ರಾಮದ ಜೀವಂತಿಕೆ ಇಂದಿನ ಅಗತ್ಯವಾಗಿದೆ. ಹಳ್ಳಿಗಳು ಸಾಂಸ್ಕೃತಿಕ ಪ್ರಜ್ಞಾವಂತಿಕೆ ರಾಜಕಾರಣದ ಕೇಂದ್ರಗಳಾಗಿ ರೂಪುಗೊಳ್ಳಬೇಕೆಂದು ಕುವೆಂಪು ವಿಶ್ವವಿದ್ಯಾನಿಲಯದ ರಿಜಿಸ್ಟಾರ್ ಡಾ. ಮಲ್ಲಿಕಾ ಘಂಟಿ ಹೇಳಿದ್ದಾರೆ. ತಾಲೂಕಿನ ಕ್ಯಾತನಬೀಡು ಗ್ರಾಮದಲ್ಲಿ ಕ್ಯಾತನಬೀಡು ಪ್ರತಿಷ್ಠಾನ ಶನಿವಾರ ಸಂಜೆ ಆಯೋಜಿಸಿದ್ದ ಸಾಹಿತ್ಯ ಸಂಭ್ರಮ ಉದ್ಘಾಟಿಸಿ ಮಾತನಾಡಿದರು. ಕವಿ ಅಗ್ರಹಾರ ಕೃಷ್ಣಮೂರ್ತಿ, ಅಧ್ಯಕ್ಷತೆ ವಹಿಸಿದ್ದ ಅಂಕಣಕಾರ ಬಿ. ಚಂದ್ರೇಗೌಡ, ಪ್ರಗತಿಪರ ಚಿಂತಕ ಬಿ.ಅಮ್ಜದ್, ರಾಜ್ಯ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಗುರುಶಾಂತಪ್ಪ, ಪದವಿಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎಚ್.ಎಂ. ರುದ್ರಸ್ವಾಮಿ ಮಾತನಾಡಿದರು.