ಇಂದು ಶಿಲಾನ್ಯಾಸ, ಉದ್ಘಾಟನೆ
ಶಿವಮೊಗ್ಗ: ಲೋಕೋಪಯೋಗಿ, ರಾಷ್ಟ್ರೀಯ ಹೆದ್ದಾರಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗಳ ಆಶ್ರಯದಲ್ಲಿ ಮಾ. 5ರಂದು ಬೆಳಗ್ಗೆ 11 ಗಂಟೆಗೆ ಸಾಗರದ ನೆಹರು ಮೈದಾನದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಿಲಾನ್ಯಾಸ, ಉದ್ಘಾಟನೆ ಮತ್ತು ವಿವಿಧ ಸರ್ಕಾರಿ ಸವಲತ್ತುಗಳ ವಿತರಣಾ ಸಮಾರಂಭ ಏರ್ಪಡಿಸಲಾಗಿದೆ.
ಕಾರ್ಯಕ್ರಮವನ್ನು ವಿಧಾನಸಭಾಧ್ಯಕ್ಷ ಕಾಗೋಡು ತಿಮ್ಮಪ್ಪನವರು ಉದ್ಘಾಟಿಸುವರು. ವಿಧಾನಪರಿಷತ್ ಸಭಾಪತಿ ಡಿ.ಎಚ್.ಶಂಕರಮೂರ್ತಿ ಉಪಸ್ಥಿತರಿರುವರು. ಲೋಕೋಪಯೋಗಿ ಸಚಿವ ಡಾ. ಎಚ್.ಸಿ. ಮಹದೇವಪ್ಪ, ಆರೋಗ್ಯ -ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್, ಗ್ರಾಮೀಣಾಭಿವೃದ್ಧಿ ಸಚಿವ ಎಚ್.ಕೆ. ಪಾಟೀಲ್, ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಗೀತಾ ಮಲ್ಲಿಕಾರ್ಜುನ, ಸಂಸದ ಬಿ.ವೈ. ರಾಘವೇಂದ್ರ, ರಾಜ್ಯಸಭಾ ಸದಸ್ಯ ಆಯನೂರು ಮಂಜುನಾಥ್ ಸೇರಿದಂತೆ ಜಿಲ್ಲೆಯ ವಿಧಾನ ಪರಿಷತ್ ಸದಸ್ಯರು, ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳು ಅಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿರುವರು.
ಸಚಿವ ಮಹದೇವಪ್ಪ ಜಿಲ್ಲಾ ಪ್ರವಾಸ
ಶಿವಮೊಗ್ಗ: ಲೋಕೋಪಯೋಗಿ ಸಚಿವ ಡಾ. ಎಚ್.ಸಿ. ಮಹದೇವಪ್ಪ ಅವರು ಮಾ. 5ರಂದು ಬೆಳಗ್ಗೆ 11ಗಂಟೆಗೆ ಸಾಗರದಲ್ಲಿ ಲೋಕೋಪಯೋಗಿ ಇಲಾಖೆ ವತಿಯಿಂದ ನಡೆಯುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಿಲಾನ್ಯಾಸ ಮತ್ತು ಉದ್ಘಾಟನಾ ಸಮಾರಂಭ ಹಾಗೂ ವಿವಿಧ ಸರ್ಕಾರಿ ಸವಲತ್ತುಗಳ ವಿತರಣಾ ಸಮಾರಂಭದಲ್ಲಿ ಭಾಗವಹಿಸುವರು. ಸಂಜೆ 4 ಗಂಟೆಗೆ ಶಿವಮೊಗ್ಗದಲ್ಲಿ ಸಾರ್ವಜನಿಕರ ಅಹವಾಲು ಆಲಿಸುವರು. ಅಂದು ರಾತ್ರಿ 10ಗಂಟೆಗೆ ಶಿವಮೊಗ್ಗದಿಂದ ಬೆಂಗಳೂರಿಗೆ ತೆರಳುವರು.