ಇಂದು ಪ್ರತಿಭಟನೆ
ಕ.ಪ್ರ.ವಾರ್ತೆ, ಭದ್ರಾವತಿ, ಮಾ.9
ರಾಜ್ಯ ಸರ್ಕಾರದ ಸಾಲ ವಸೂಲಿ ನೀತಿ ಮತ್ತು ಸಾಲ ವಸೂಲಾತಿಗಾಗಿ ರೈತರನ್ನು ಜೈಲಿಗೆ ಅಟ್ಟುವ ಪಿಎಲ್ಡಿ ಬ್ಯಾಂಗಿನ ದೌರ್ಜನ್ಯ ವಿರೋಧಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ತಾಲೂಕು ಶಾಖೆಯು ಸೋಮವಾರ ಬೆಳಗ್ಗೆ 11 ಗಂಟೆಗೆ ರಾಜ್ಯ ಸಾರಿಗೆ ಬಸ್ ನಿಲ್ದಾಣದ ಮುಂಭಾಗದಿಂದ ತಾಲೂಕು ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಂಡಿದೆ. ರೈತ ಸಂಘದ ರಾಜ್ಯ ಕಾರ್ಯಾಧ್ಯಕ್ಷ ಕೆ.ಟಿ.ಗಂಗಾಧರ್ ನೇತೃತ್ವದಲ್ಲಿ ನಡೆಯುವ ಪ್ರತಿಭಟನೆಯಲ್ಲಿ ರೈತರು, ರೈತ ಮಹಿಳೆಯರು, ಕೃಷಿ ಕೂಲಿ ಕಾರ್ಮಿಕರು, ನಾಗರಿಕರು ಪಾಲ್ಗೊಳ್ಳಬೇಕೆಂದು ಕೋರಲಾಗಿದೆ.