ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ಚುನಾವಣೆ- ಬಿಜೆಪಿ ಕಾರ್ಯಾಗಾರ

Rashmi Kasaragodu
Updated On : 12 Mar 2014, 1:34 am

ಶಿವಮೊಗ್ಗ: ಬರಲಿರುವ ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬಿಜೆಪಿ ಮಾ.12ರ ಬುಧವಾರದಂದು ನಗರದ ದೈವಜ್ಞ ಕಲ್ಯಾಣ ಮಂದಿರದಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಚುನಾವಣಾ ನಿರ್ವಹಣಾ ಸಮಿತಿಯ ಕಾರ್ಯಗಾರ ಹಮ್ಮಿಕೊಂಡಿದ್ದು, ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಮಂಡಲ ಹಾಗೂ ಲೋಕಸಭಾ ಕ್ಷೇತ್ರದ ಚುನಾವಣಾ ನಿರ್ವಹಣಾ ಸಮಿತಿಯ ಎಲ್ಲಾ ಅಪೇಕ್ಷಿತರು ಭಾಗವಹಿಸಲಿದ್ದಾರೆ. ಜಿಲ್ಲಾಧ್ಯಕ್ಷರು ಹಾಗೂ ರಾಜ್ಯಸಭಾ ಸದಸ್ಯ ಆಯನೂರು ಮಂಜುನಾಥ್, ವಿಧಾನಪರಿಷತ್ ಸದಸ್ಯ ಎಂ.ಬಿ. ಭಾನುಪ್ರಕಾಶ್, ಸಿದ್ದರಾಮಣ್ಣ, ಕ್ಷೇತ್ರ ಸಹ ಪ್ರಭಾರಿ ಗಿರೀಶ್ ಪಟೇಲ್, ರಾಜ್ಯ ಪ್ರಮುಖರಾದ ಪ್ರಸಾದ್ ಕುಮಾರ್ ಸೇರಿದಂತೆ ಹಲವರು ಭಾಗವಹಿಸಲಿದ್ದಾರೆ.



ಸ್ವಚ್ಛತಾ ಅರಿವು ಅಗತ್ಯ
ಹೊಸನಗರ: ವಿದ್ಯಾರ್ಥಿಗಳಿಗೆ ಸ್ವಚ್ಛತೆ ಮತ್ತು ಶೌಚಾಲಯ ಬಳಕೆ ಬಗ್ಗೆ ಅರಿವು ಮೂಡಿಸುವುದು ಇಂದಿನ ತುರ್ತು ಅಗತ್ಯವಾಗಿದೆ ಎಂದು ತಾಲೂಕಿನ ನಗರ- ಚಿಕ್ಕಪೇಟೆ ಕೆನರಾ ಬ್ಯಾಂಕ್ ಪ್ರಬಂಧಕ ಶ್ರೀನಿವಾಸ್ ಹೇಳಿದರು. ನಗರದ ಹಿರಿಯ ಪ್ರಾಥಮಿಕ ಬಾಲಕಿಯರ ಶಾಲೆಗೆ ಸುಸಜ್ಜಿತ ಶೌಚಾಲಯವನ್ನು ಕೆನರಾ ಬ್ಯಾಂಕ್ ವತಿಯಿಂದ ಕೊಡುಗೆಯಾಗಿ ನೀಡಲಾಗಿದ್ದು, ನೂತನ ಕಟ್ಟಡವನ್ನು ಶಾಲೆಗೆ ಹಸ್ತಾಂತರಿಸಿ ಮಾತನಾಡಿದರು.
ಮುಖ್ಯ ಶಿಕ್ಷಕಿ ಟಿ.ಎನ್. ಸುವರ್ಣ ಅಧ್ಯಕ್ಷತೆ ವಹಿಸಿದ್ದರು. ಪ್ರಮೀಳಾ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement