ಬಿಎಡ್ ಕಾಲೇಜಿನಲ್ಲಿ ಮಹಿಳಾ ದಿನಾಚರಣೆ
ಶಿವಮೊಗ್ಗ: ಸದೃಢ ಸಮಾಜಕ್ಕೆ ಮಹಿಳೆಯ ಕೊಡುಗೆ ಅಪಾರವಾಗಿದ್ದು, ಭಾರತೀಯ ಸಂಸ್ಕೃತಿಯಲ್ಲಿ ಮಹಿಳೆಗೆ ತಾಯಿಯ ಸ್ಥಾನ ನೀಡಿದ್ದು ಗಮನಾರ್ಹ ಎಂದು ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಪರಿಸರ ವಿಜ್ಞಾನ ವಿಭಾಗದ ಮುಖ್ಯಸ್ಥ ಹಾಗೂ ವಿವೇಕ ಜೆಸಿಐ ಸಂಸ್ಥೆಯ ಅಧ್ಯಕ್ಷ ಡಾ. ನಾಗರಾಜ್ ಪರಿಸರ ಹೇಳಿದರು.
ನಗರದ ಆಲ್ ಮೊಹಮದ್ ಬಿಎಡ್ ಕಾಲೇಜಿನಲ್ಲಿ ಸಾಂಸ್ಕೃತಿಕ ಸಂಘದ ಹಾಗೂ ವಿಶ್ವ ಮಹಿಳಾ ದಿನಾಚರಣೆ ಸಮಾರಂಭ ಉದ್ಘಾಟಿಸಿ ಮಾತನಾಡಿ, ಪ್ರತಿಯೊಬ್ಬ ಯಶಸ್ವಿ ಪುರುಷನ ಹಿಂದೆ ಮಹಿಳೆಯ ಪಾತ್ರ ಇರುತ್ತದೆ ಎಂಬುದನ್ನು ಕೇಳುತ್ತಿದ್ದೆವು. ಆದರೆ, ಇತ್ತೀಚಿನ ದಿನಗಳಲ್ಲಿ ಮಹಿಳೆಯು ಸ್ವಾವಲಂಬಿಯಾಗುವ ಉದ್ದೇಶದಿಂದ ಸೇವಾ ಮನೋಭಾವ ಕಳೆದುಕೊಳ್ಳುತ್ತಿರುವುದು ಕಂಡುಬರುತ್ತಿದೆ ಎಂದು ತಿಳಿಸಿದರು.
ವಿವೇಕ ಜೆಸಿಐ ಸಂಸ್ಥೆಯ ದೀಪು, ಸುರೇಶ್, ಪೂಜಾ ನಾಗರಾಜ್ ಮಾತನಾಡಿದರು. ಉಪನ್ಯಾಸಕಿ ತೇಜಸ್ವಿನಿ ಉಪನ್ಯಾಸ ನೀಡಿದರು. ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಕುಬೇಂದ್ರಪ್ಪ ವಹಿಸಿದ್ದರು.
ಭಾರತಿ ಹಾಗೂ ಪ್ರಿಯ ವಿವಿಧ ಸ್ಪರ್ಧೆಗಳನ್ನು ನಡೆಸಿಕೊಟ್ಟರು.