ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ವಿವಿಧ ವೃತ್ತಿ ತರಬೇತಿಗೆ ಅರ್ಜಿ ಆಹ್ವಾನ

Rashmi Kasaragodu
Updated On : 12 Mar 2014, 1:34 am

ಶಿವಮೊಗ್ಗ: ಹೊಳಲೂರಿನ ಕೆನರಾ ಬ್ಯಾಂಕ್ ಸ್ವ ಉದ್ಯೋಗ ತರಬೇತಿ ಸಂಸ್ಥೆಯು  ಜಿಲ್ಲೆಯ ವಿದ್ಯಾವಂತ ನಿರುದ್ಯೋಗಿ ಯುವಕ-ಯುವತಿಯರಿಗೆ ವಿವಿಧ ವಿಷಯಗಳ ಅಲ್ಪಾವಧಿ ಮತ್ತು ದೀರ್ಘಾವಧಿ ತರಬೇತಿ ಶಿಬಿರವನ್ನು ಏರ್ಪಡಿಸಲು ಉದ್ದೇಶಿಸಿದ್ದು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಹೈನುಗಾರಿಕೆ ಮತ್ತು ಎರೆಹುಳು ಗೊಬ್ಬರ, ಕುರಿ ಸಾಕಾಣಿಕೆ, ತೋಟಗಾರಿಕೆ ಬೆಳೆಗಳು, ವಿದ್ಯುತ್ ಮೋಟಾರ್ ರಿವೈಂಡಿಂಗ್ ಮತ್ತು ಪಂಪ್ ಸೆಟ್ ದುರಸ್ತಿ ಸೇರಿದಂತೆ ವಿವಿಧ ಉದ್ಯೋಗಗಳಲ್ಲಿ ತರಬೇತಿ ನೀಡಲಾಗುವುದು. ಆಸಕ್ತರು  ಸ್ವವಿವರದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ನಿರ್ದೇಶಕರು, ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆ, ಹೊಳಲೂರು, ಶಿವಮೊಗ್ಗ ವಿಳಾಸಕ್ಕೆ ಸಲ್ಲಿಸಬೇಕು. ಹೆಚ್ಚಿನ ವಿವರಗಳಿಗಾಗಿ ದೂರವಾಣಿ- 08182-245721, ಮೊ.- 9538271653 ಸಂಪರ್ಕಿಸಬಹುದು ಸಂಸ್ಥೆಯ ನಿರ್ದೇಶಕರು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement