ವೈದ್ಯಾಧಿಕಾರಿಗಳ ಹುದ್ದೆಗೆ ಅರ್ಜಿ ಆಹ್ವಾನ
ಶಿವಮೊಗ್ಗ: ಜಿಲ್ಲೆಯ ಗ್ರಾಮೀಣ ಪ್ರದೇಶದ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ ಸಾಮಾನ್ಯ ಕರ್ತವ್ಯದ ವೈದ್ಯಾಧಿಕಾರಿಗಳ 25 ಹುದ್ದೆಗಳಿಗೆ ಗುತ್ತಿಗೆ ಒಪ್ಪಂದದ ಷರತ್ತಿನೊಂದಿಗೆ ಒಂದು ವರ್ಷದ ಕಾಲಾವಧಿಗೆ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಯು ಅಂಗೀಕೃತ ವಿಶ್ವವಿದ್ಯಾನಿಲಯದಿಂದ ಎಂ.ಬಿ.ಬಿ.ಎಸ್. ಪದವಿಯೊಂದಿಗೆ 12 ತಿಂಗಳ ಹೌಸ್‌ಮೆನ್‌ಶಿಪ್ ಪೂರೈಸಿರಬೇಕು ಹಾಗೂ ಕರ್ನಾಟಕ ವೈದ್ಯಕೀಯ ಮಂಡಳಿಯಲ್ಲಿ ನೋಂದಾಯಿಸಿರಬೇಕು. ಸಾಮಾನ್ಯ ಅಭ್ಯರ್ಥಿಗಳು 42 ವರ್ಷ, ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳು-45 ವರ್ಷ ಹಾಗೂ ಪ.ಜಾತಿ., ಪ.ಪಂಗಡದ ಅಭ್ಯರ್ಥಿಗಳು-47 ವರ್ಷ ಮೀರಿರಬಾರದು. ಮೀಸಲಾತಿ ಅಭ್ಯರ್ಥಿಗಳು ಸಕ್ಷಮ ಪ್ರಾಧಿಕಾರದಿಂದ ಪಡೆದ ಆದಾಯ ಮತ್ತು ಜಾತಿ ಪ್ರಮಾಣ ಪತ್ರ ಹೊಂದಿರಬೇಕು. ನೇಮಕಾತಿಯು ಗ್ರಾಮೀಣ ಪ್ರದೇಶದಲ್ಲಿ ಮಾತ್ರವಾಗಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಹೆಯಾನ 13,950 ವೇತನ ಹಾಗೂ ಭತ್ಯೆಗಳನ್ನು ನೀಡಲಾಗುವುದು. ಮೀಸಲಾತಿನ್ವಯ ನೇಮಕಾತಿ ನಡೆಯಲಿದೆ. ಆಸಕ್ತರು ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಮಾರ್ಚ್ 29ರೊಳಗಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ, ಬಿ.ಎಚ್.ರಸ್ತೆ, ಶಿವಮೊಗ್ಗ ಈ ವಿಳಾಸಕ್ಕೆ ಸಲ್ಲಿಸಬೇಕು. ವಿವರಗಳಿಗಾಗಿ ದೂ- 08182-222382ನ್ನು ಸಂಪರ್ಕಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.
ಶ್ರೀಲಕ್ಷ್ಮೀನಾರಾಯಣ ಹೃದಯ ಹೋಮ
ಶಿವಮೊಗ್ಗ: ಕೋಟೆ ರಸ್ತೆಯ ಶನೈಶ್ಚರ ಸೇವಾ ಸಮಿತಿಯು ಮಾ.16 ರಂದು ಹುಣ್ಣಿಮೆ ಪ್ರಯುಕ್ತ ಸತ್ಯನಾರಾಯಣಸ್ವಾಮಿಗೆ ಪಂಚಾಮೃತ ಅಭಿಷೇಕ, ಸಾಮೂಹಿಕ ಲಕ್ಷ್ಮೀನಾರಾಯಣ ಹೃದಯ ಹೋಮವನ್ನು ಆಯೋಜಿಸಿದೆ. ಅಭಿಷೇಕ ಬೆಳಗ್ಗೆ 6.30 ರಿಂದ ಆರಂಭವಾಗಲಿದೆ. ಹೋಮವು 9.30 ರಿಂದ 11.30 ರವರೆಗೆ ನಡೆಯಲಿದೆ ಎಂದು ಸಮಿತಿ ತಿಳಿಸಿದೆ. ಸಂಪರ್ಕ ಸಂಖ್ಯೆ. 9449699584.