ನಿವೃತ್ತ ಕಾರ್ಮಿಕರ ಸಂಘದ ಒಕ್ಕೂಟ ರಚನೆ
ಭದ್ರಾವತಿ: ಭಾರತೀಯ ಉಕ್ಕು ಪ್ರಾಧಿಕಾರದ ಕಾರ್ಖಾನೆಗಳ ನಿವೃತ್ತ ಕಾರ್ಮಿಕರ ಸಂಘಗಳ ಸಭೆಯಲ್ಲಿ ಅಖಿಲ ಭಾರತ ಮಟ್ಟದಲ್ಲಿ ಎಲ್ಲಾ ಸಂಘಗಳ ಒಕ್ಕೂಟ ರಚಿಸಿ, ಅದಕ್ಕೆ ರೂರ್ಕೆಲಾದಲ್ಲಿ ಚಾಲನೆ ನೀಡಲಾಯಿತು ಎಂದು ಭದ್ರಾವತಿಯ ವಿಐಎಸ್ಎಲ್ ನಿವೃತ್ತ ಕಾರ್ಮಿಕರ ಸಂಘದ ಪ್ರಕಟಣೆ ತಿಳಿಸಿದೆ. ರಾಂಚಿಯ ಡಾ. ಶರ್ಮ ಅವರನ್ನು ಸರ್ವಾನುಮತದಿಂದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ವಿಐಎಸ್ಎಲ್ ನಿವೃತ್ತ ಕಾರ್ಮಿಕರ ಸಂಘದ ಅಧ್ಯಕ್ಷ ಜೆ.ಎಸ್. ನಾಗಭೂಷಣ ಒಕ್ಕೂಟದ ಉಪಾಧ್ಯಕ್ಷರಾಗಿ ಹಾಗೂ ಬಿ. ಯಲ್ಲಪ್ಪ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ ಎಂದು ತಿಳಿಸಲಾಗಿದೆ.