ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ಮಲ್ಲಿಕಾರ್ಜುನಯ್ಯ ನಿಧನಕ್ಕೆ ಬಿಜೆಪಿ ಸಂತಾಪ

Rashmi Kasaragodu
Updated On : 14 Mar 2014, 11:29 am

ಶಿವಮೊಗ್ಗ: ಹಿರಿಯ ಮುಖಂಡ, ಲೋಕಸಭೆ ಮಾಜಿ ಡೆಪ್ಯೂಟಿ ಸ್ವೀಕರ್, ತುಮಕೂರು ಮಾಜಿ ಸಂಸದ ಎಸ್. ಮಲ್ಲಿಕಾರ್ಜುನಯ್ಯ ಅವರ ನಿಧನಕ್ಕೆ ಶಿವಮೊಗ್ಗ ಜಿಲ್ಲಾ ಬಿಜೆಪಿ ತೀವ್ರ ಸಂತಾಪ ಸೂಚಿಸಿದೆ.
ಸರಳ ಮತ್ತು ಸಜ್ಜನಿಕೆಯ ಸ್ವಭಾವದವರಾದ ಮಲ್ಲಿಕಾರ್ಜುನಯ್ಯ ಅವರು ಎಲ್ಲಾ ಕಾರ್ಯಕರ್ತರೊಂದಿಗೆ ಆತ್ಮೀಯತೆಯಿಂದ ನಡೆದುಕೊಳ್ಳುತ್ತಿದ್ದುದ್ದು ನಮ್ಮೆಲ್ಲರಿಗೂ ಆದರ್ಶಮಯ.
  ವಿಶೇಷವಾಗಿ 1973ರಲ್ಲಿ ಎಸ್. ಮಲ್ಲಿಕಾರ್ಜುನಯ್ಯ ಅವರು ರಾಜ್ಯ ಜನಸಂಘದ ಅಧ್ಯಕ್ಷರಾಗಿದ್ದ ಸಂದರ್ಭ ಶಿವಮೊಗ್ಗೆಯಲ್ಲಿ ಬೃಹತ್ ಸಮಾವೇಶವನ್ನು ಹಮ್ಮಿಕೊಳ್ಳಲಾಗಿತ್ತು. ಅಂದು ಅವರನ್ನು ತೆರೆದ ವಾಹನದಲ್ಲಿ ಮೆರವಣಿಗೆಯ ಮುಖೇನ ಸಂಭ್ರಮದಿಂದ ಕರೆತಂದ ಆ ನೆನಪು ಹಸಿರಾಗಿ ಉಳಿದಿದೆ. ಅಲ್ಲದೇ ಜನಸಂಘದ ಕೊನೆಯ ಅಧಿವೇಶನವು ಇದಾಗಿತ್ತು. ನಂತರದಲ್ಲಿ ದೇಶಾದ್ಯಂತ ತುರ್ತು ಪರಿಸ್ಥಿತಿ ಜಾರಿಗೆಯಾಯಿತು. ನಂತರ ಜನತಾ ಪಾರ್ಟಿಯಾಗಿ ಮುಂದುವರೆಯಿತು ಎಂದು ವಿಧಾನ ಪರಿಷತ್ ಸದಸ್ಯ ಭಾನುಪ್ರಕಾಶ್ ನೆನಪಿಸಿಕೊಂಡಿದ್ದಾರೆ.
ಮೃತರ ಆತ್ಮಕ್ಕೆ ಶಾಂತಿ ದೊರಕಲೆಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ, ಸಂಸತ್ ಸದಸ್ಯ ಆಯನೂರು ಮಂಜುನಾಥ್, ಸಂಸದ ಬಿ.ವೈ. ರಾಘವೇಂದ್ರ, ವಿಧಾನಪರಿಷತ್ ಸದಸ್ಯ ಆರ್.ಕೆ. ಸಿದ್ದರಾಮಣ್ಣ, ವಿಭಾಗಸಹ ಪ್ರಭಾರಿಗಳಾದ ಗಿರೀಶ್ ಪಟೇಲ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಸ್. ದತ್ತಾತ್ರಿ ಸೇರಿದಂತೆ ಹಲವರು ಸಂತಾಪ ವ್ಯಕ್ತಪಡಿಸಿದ್ದಾರೆ.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement