ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷಗೆ ಬೆದರಿಕೆ

Rashmi Kasaragodu
Updated On : 15 Mar 2014, 11:11 am

ಹೊಸನಗರ: ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಕುಮಾರ್ ಬಂಗಾರಪ್ಪ ಅವರಿಗೆ ಟಿಕೆಟ್ ನೀಡದ ಹಿನ್ನೆಲೆಯಲ್ಲಿ ತಾಲೂಕಿನ ಸಂಪೇಕಟ್ಟೆ ಕಾರ್ಯಕರ್ತ ಗಣಪತಿ ಎಂಬಾತ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ. ಎನ್.ಡಿ. ಸುಂದರೇಶ್ ಮೊಬೈಲ್‌ಗೆ ಕರೆ ನೀಡಿ ಬೆದರಿಕೆ ಹಾಕಿರುವ ಘಟನೆ ಗುರುವಾರ ರಾತ್ರಿ ನಡೆದಿದೆ. ನೀವೆಲ್ಲ ಇದ್ದು ಕುಮಾರ್ ಬಂಗಾರಪ್ಪ ಅವರಿಗೆ ಏಕೆ ಟಿಕೆಟ್ ನೀಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಲ್ಲದೆ, ನಿಂದಿಸಿದ್ದಾರೆ. 'ನಿಮ್ಮನ್ನು ನೋಡಿಕೊಳ್ಳುತ್ತೇನೆ...' ಎಂದು ಬೆದರಿಸಿದ್ದಾರೆ ಎಂದು ಪೊಲೀಸರಿಗೆ ಮೌಖಿಕ ದೂರು ನೀಡಲಾಗಿತ್ತು. ಈ ಸಂಬಂಧ ನಗರ ಪೊಲೀಸ್ ಠಾಣೆ ಪಿಎಸ್‌ಐ ಸತೀಶ್ ಅವರು ಗಣಪತಿ ಅವರನ್ನು ಠಾಣೆಗೆ ಕರೆಸಿ ವಿಚಾರಣೆ ನಡೆಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement