ಮಲ್ಲಿಕಾರ್ಜುನ ನಿಧನ: ಡಿಚ್ಚೆಸ್ ಸಂತಾಪ
ಶಿವಮೊಗ್ಗ: ಹತ್ತನೇ ಲೋಕಸಭೆಯ ಉಪಾಧ್ಯಕ್ಷರಾಗಿ, ಕರ್ನಾಟಕ ವಿಧಾನ ಪರಿಷತ್ತಿನ ಉಪಸಭಾಪತಿಯಾಗಿ ಕಾರ್ಯನಿರ್ವಹಿಸಿದ್ದ ಎಸ್. ಮಲ್ಲಿಕಾರ್ಜುನ ಅವರ ನಿಧನಕ್ಕೆ ವಿಧಾನಪರಿಷತ್ ಸಭಾಧ್ಯಕ್ಷ ಡಿ.ಎಚ್. ಶಂಕರಮೂರ್ತಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಉತ್ತಮ ಸಂಸದೀಯ ಪಟುವಾಗಿ ಸಮರ್ಥವಾಗಿ ಸೇವೆ ಸಲ್ಲಿಸಿರುವ ಇವರು ರಾಜ್ಯದ ವಿವಿಧ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಜವಾಬ್ದಾರಿಯುತವಾದ ಹುದ್ದೆಗಳನ್ನು ನಿರ್ವಹಿಸಿದ್ದರು. ಇವರ ನಿಧನದಿಂದಾಗಿ ರಾಜ್ಯ ಒಬ್ಬ ಹಿರಿಯ ಮುತ್ಸದ್ಧಿಯನ್ನು ಕಳೆದುಕೊಂಡಂತಾಗಿದೆ ಎಂದು ಅವರು ಶೋಕಸಂದೇಶದಲ್ಲಿ ತಿಳಿಸಿದ್ದಾರೆ.