ಸತೀಶ ಸಾಲಿಯಾನ್ ಶಿವಮೊಗ್ಗದಿಂದ ಸ್ಪರ್ಧೆ
ಬೆಂಗಳೂರು: ರಾಜ್ಯದಲ್ಲಿ ನಡೆಯುವ ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಹೆಬ್ರಿ ತಿಮ್ಮಸೋಮಯ್ಯ ಮಡಿವಾಳ ಶಿಕ್ಷಣ ಮತ್ತು ಸೇವಾ ಪ್ರತಿಷ್ಠಾನದ ಅಧ್ಯಕ್ಷ ಸಾಣೂರು ಸತೀಶ ಸಾಲಿಯಾನ್ ತಿಳಿಸಿದರು. ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಮಡಿವಾಳ ಸಮಾಜದ ಮತದಾರರು ಸ್ಪರ್ಧಿಸುವ ಕ್ಷೇತ್ರದಲ್ಲಿ ಹೆಚ್ಚಾಗಿರುವ ಕಾರಣ ಈ ಕ್ಷೇತ್ರದಿಂದ ಕಣಕ್ಕಿಳಿಯಲು ನಿರ್ಧರಿಸಲಾಗಿದೆ ಎಂದು ಹೇಳಿದರು.