ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ಅನೈತಿಕ ಮೈತ್ರಿ'

Rashmi Kasaragodu
Updated On : 18 Mar 2014, 11:40 am

ಹೊಸನಗರ: ಬಿಜೆಪಿಯಿಂದ ಆಯ್ಕೆಯಾಗಿ ಜೆಡಿಎಸ್ ಅಭ್ಯರ್ಥಿಗೆ ಮತ ಚಲಾಯಿಸುವ ಮೂಲಕ ಸಂಸದ ಬಿ.ವೈ.ರಾಘವೇಂದ್ರ ಬಿಜೆಪಿಗೆ ಮತನೀಡಿದವರಿಗೆ ಅವಮಾನ ಮಾಡಿದ್ದಾರೆ ಎಂದು ಆಮ್ ಆದ್ಮಿ ಪಾರ್ಟಿ ಸಾಗರ ವಿಧಾನಸಭಾ ಕ್ಷೇತ್ರ ಸಂಚಾಲಕ ವಾಟಗೋಡು ಸುರೇಶ್ ಆರೋಪಿಸಿದರು.
 ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್‌ಗೆ ವಿರುದ್ಧವಾಗಿ 5 ಲಕ್ಷಕ್ಕೂ ಅಧಿಕ ಮತದಾರರು ರಾಘವೇಂದ್ರ ಅವರಿಗೆ ಮತನೀಡಿ ಗೆಲ್ಲಿಸಿದ್ದಾರೆ. ಆದರೆ ಸಂಸದರು ಜನರ ತೀರ್ಪಿಗೆ ವಿರುದ್ಧವಾಗಿ ಜೆಡಿಎಸ್‌ನೊಂದಿಗೆ ಅನೈತಿಕ ಮೈತ್ರಿ ಮಾಡಿಕೊಂಡಿದ್ದಾರೆ. ಇದು ದೇವೇಗೌಡರನ್ನು ಪ್ರಧಾನಿ ಅಭ್ಯರ್ಥಿಯಾಗಿ ಒಪ್ಪಿಕೊಂಡಂತೆ ಎಂದು ಟೀಕಿಸಿದರು.
 ಭ್ರಷ್ಟಾಚಾರ ಮುಕ್ತ ಆಡಳಿತ ನೀಡುವ ಆಮ್ ಆದ್ಮಿ ಪಾರ್ಟಿ ಉದ್ದೇಶಕ್ಕೆ ಜನರು ಬೆಂಬಲಿಸಬೇಕು. ನಮ್ಮ ಪಕ್ಷ ಅಧಿಕಾರಕ್ಕೆ ಅಂಟಿಕೊಳ್ಳುವುದಿಲ್ಲ. ಗ್ರಾಮರಾಜ್ಯದ ಕನಸು ನನಸಾಗುವವರೆಗೂ ಚುನಾವಣೆಯಲ್ಲಿ ಸೋಲು ಗೆಲುವನ್ನು ಲೆಕ್ಕಿಸದೆ ಹೋರಾಟ ಮುಂದುವರೆಸುವುದಾಗಿ ತಿಳಿಸಿದ ಅವರು, ಬೇರೆ ರಾಜಕೀಯ ಪಕ್ಷಗಳಿಂದ ಭ್ರಮನಿರಸನಗೊಂಡವರು ಆಮ್ ಆದ್ಮಿ ಪಾರ್ಟಿಯನ್ನು ಬೆಂಬಲಿಸುವಂತೆ ಮನವಿ ಮಾಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement