ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ಜೆಡಿಯು ಟಿಕೆಟ್‌ಗೆ ಧರ್ಮಪ್ಪ, ಶಿವರುದ್ರಸ್ವಾಮಿ ಆಸಕ್ತಿ

Rashmi Kasaragodu
Updated On : 18 Mar 2014, 11:40 am

ಕ.ಪ್ರ.ವಾರ್ತೆ, ಸಾಗರ, ಮಾ.17
ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಜೆಡಿಯು ಸ್ವತಂತ್ರವಾಗಿ ಸ್ಪರ್ಧಿಸಲಿದೆ. ಜಿಲ್ಲೆಯಲ್ಲಿ ಮಾಜಿ ಮುಖ್ಯಮಂತ್ರಿ ದಿ.ರಾಮಕೃಷ್ಣ ಹೆಗಡೆ ಅಭಿಮಾನಿಗಳು ದೊಡ್ಡ ಪ್ರಮಾಣದಲ್ಲಿದ್ದು, ಈ ಬಾರಿ ಪಕ್ಷ ಬೆಂಬಲಿಸಿದ್ದಾರೆ ಎಂದು ಮಾಜಿ ಶಾಸಕ ಹಾಗೂ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಜೆಡಿಯು ಟಿಕೆಟ್ ಆಕಾಂಕ್ಷಿತ ಅಭ್ಯರ್ಥಿ ಬಿ.ಧರ್ಮಪ್ಪ ಹೇಳಿದರು.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಜೆಡಿಯು ವತಿಯಿಂದ ಸ್ಪರ್ಧಿಸಲು ನಾನು ಹಾಗೂ ಶಿವರುದ್ರಸ್ವಾಮಿ ಇಬ್ಬರು ಆಕಾಂಕ್ಷಿಗಳಾಗಿದ್ದೇವೆ. ಪಕ್ಷ ಯಾರಿಗೆ “¸’ ಫಾರಂ ನೀಡುತ್ತದೆಯೋ ಅವರು ಕಣಕ್ಕೆ ಇಳಿಯುತ್ತೇವೆ. ಪಕ್ಷದ ರಾಜ್ಯಾಧ್ಯಕ್ಷ ಎಂ.ಪಿ. ನಾಡಗೌಡ ಅವರು ಈಗಾಗಲೇ ದೆಹಲಿಗೆ ತೆರಳಿದ್ದು, ಪಕ್ಷದ “¸’ ಫಾರಂ ತರಲಿದ್ದಾರೆ ಎಂದರು.
ಜೆಡಿ(ಎಸ್) ಶಾಸಕ ಹಾಗೂ ಯುವ ಘಟಕದ ಅಧ್ಯಕ್ಷ ಮಧು ಬಂಗಾರಪ್ಪ ಕುಟುಂಬ ರಾಜಕಾರಣವನ್ನು ಜಿಲ್ಲೆಯಲ್ಲಿ ಪ್ರತಿಪಾದಿಸುತ್ತಿದ್ದಾರೆ.
  ತಮ್ಮ ತಂದೆ ನಂತರ ತಮ್ಮ ಕುಟುಂಬದವರೇ ಸಂಸದರಾಗಬೇಕು ಎಂದು ಹೇಳುತ್ತಿದ್ದಾರೆ. ಜಿಲ್ಲೆಯಲ್ಲಿ ಕುಟುಂಬ ರಾಜಕಾರಣ ಮುಂದುವರಿಯಬಾರದು ಎನ್ನುವ ಉದ್ದೇಶ ನನ್ನದು ಎಂದರು.
ಮೈತ್ರಿ- ಸೀಟು ಹಂಚಿಕೆ:  ಜೆಡಿಯು ಕೇವಲ ಪ್ರಾದೇಶಿಕ ಪಕ್ಷವಾಗಿ ಉಳಿದಿಲ್ಲ. ರಾಷ್ಟ್ರಾದ್ಯಂತ ಪಕ್ಷ ಬೆಳೆದಿದೆ. ದೇಶಕ್ಕೆ ಒಬ್ಬ ಪ್ರಧಾನಮಂತ್ರಿಯನ್ನೂ ನೀಡಿದೆ. ಈಗಾಗಲೆ ಪಕ್ಷವು ಜೆಡಿ(ಎಸ್)ನೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಪ್ರಯತ್ನ ಮುಂದುವರಿಸಿದೆ.
   ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಿದ್ದಾರೆ. ರಾಜ್ಯದಲ್ಲಿ ಪಕ್ಷದ ರಾಜ್ಯಾಧ್ಯಕರು ಹಾಗೂ ನಾನು ದೇವೇಗೌಡ ಅವರನ್ನು ಭೇಟಿ ಮಾಡಿ, ಮೈತ್ರಿ ಹಾಗೂ ಸೀಟು ಹಂಚಿಕೆ ಸಂಬಂಧ ಮಾತುಕತೆ ನಡೆಸುವ ಪ್ರಯತ್ನ ನಡೆಸಿದ್ದರೂ ಕಾರಣಾಂತರದಿಂದ ಸಾಧ್ಯವಾಗಿಲ್ಲ ಎಂದರು.
ರಾಜ್ಯದಲ್ಲಿ ಪಕ್ಷ 5 ಲೋಕಸಭಾ ಸ್ಥಾನಗಳನ್ನು ಗೆಲ್ಲುವ ಸಾಧ್ಯತೆ ಇದ್ದು, ಶಿವಮೊಗ್ಗ ಜಿಲ್ಲೆಯಲ್ಲಿಯೂ ಪ್ರಬಲ ಪೈಪೋಟಿ ನೀಡಲಿದೆ. ಜನಪರ ಹಾಗೂ ಭ್ರಷ್ಟಾಚಾರಮುಕ್ತ ಆಡಳಿತ ಜೆಡಿಯು ಗುರಿ ಎಂದು ತಿಳಿಸಿದರು.
ಪಕ್ಷದ ಜಿಲ್ಲಾ ಸಂಚಾಲಕ ಜಯಪ್ರಕಾಶ್, ವಕ್ತಾರ ನಟರಾಜ ಕಾನುಗೋಡು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement