ತಹಸೀಲ್ದಾರ್ಗೆ ಬೀಳ್ಕೊಡುಗೆ
ಶಿರಾಳಕೊಪ್ಪ: ಶಿರಾಳಕೊಪ್ಪ ಪಟ್ಟಣ ಪಂಚಾಯ್ತಿ ಕಚೇರಿಯಲ್ಲಿ ಕಳೆದ ಒಂದು ವರ್ಷದಿಂದ ಆಡಳಿತಾಧಿಕಾರಿ ಆಗಿ ಕಾರ್ಯನಿರ್ವಹಿಸಿದ ತಹಸೀಲ್ದಾರ್ ಧರ್ಮೋಜಿರಾವ್ ಅವರನ್ನು ಆತ್ಮಿಯವಾಗಿ ಕಚೇರಿಯಲ್ಲಿ ಮುಖ್ಯಾಧಿಕಾರಿ ರಾಜ್ಕುಮಾರ್ ಮತ್ತು ಸಿಬ್ಬಂದಿ ಬಿಳ್ಕೊಟ್ಟರು.
ಶಿಕಾರಿಪುರ ತಹಶೀಲ್ದಾರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಧರ್ಮೋಜಿರಾವ್ ಒಂದು ವರ್ಷದ ಹಿಂದೆ ಇಲ್ಲಿ ಅಧಿಕಾರ ವಹಿಸಿಕೊಂಡಿದ್ದರು. ಚುನಾವಣೆ ಹಿನ್ನೆಲೆಯಲ್ಲಿ ಧರ್ಮೋಜಿರಾವ್ ಅವರನ್ನು ಸಾಗರ ತಹಶೀಲ್ದಾರ್ ಆಗಿ ವರ್ಗಾವಣೆ ಮಾಡಲಾಗಿದೆ.
ಪಪಂ ಅಧ್ಯಕ್ಷ-ಉಪಾಧ್ಯಕ್ಷರು ಅವರನ್ನು ಭೇಟಿ ಮಾಡಿ ಅಭಿನಂದಿಸಿದರು.