ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ನಾಳೆ ಯಡಿಯೂರಪ್ಪ ನಾಮಪತ್ರ ಸಲ್ಲಿಕೆ

Rashmi Kasaragodu
Updated On : 19 Mar 2014, 11:51 am

ಶಿವಮೊಗ್ಗ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ಎಸ್. ಯಡಿಯೂರಪ್ಪ ಅವರ ಮಾ. 20ರಂದು ನಾಮಪತ್ರ ಸಲ್ಲಿಸಲಿದ್ದಾರೆ.
ಪಕ್ಷದ ಜಿಲ್ಲಾಧ್ಯಕ್ಷ ಆಯನೂರು ಮಂಜುನಾಥ್ ಅವರು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ್ದು, ಅಂದು ಬೆಳಗ್ಗೆ 10 ಗಂಟೆಗೆ ರಾಮಣ್ಣ ಶ್ರೇಷ್ಠಿ ಪಾರ್ಕ್‌ನಿಂದ ಮೆರವಣಿಗೆ ಹೊರಟು, ಗಾಂಧಿ ಬಜಾರ್, ಶಿವಪ್ಪ ನಾಯಕ ವೃತ್ತ, ಅಮೀರ್ ಅಹ್ಮದ್ ವೃತ್ತ, ನೆಹರೂ ರಸ್ತೆ, ಬಾಲರಾಜ ಅರಸ್ ರಸ್ತೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ ನಾಮಪತ್ರ ಸಲ್ಲಿಸುವರು ಎಂದರು.
ಶಿವಮೊಗ್ಗ ವಿಧಾನಸಭಾ ಕ್ಷೇತ್ರ ಹಾಗೂ ಭದ್ರಾವತಿ ಟೌನ್ ಕಾರ್ಯಕರ್ತರು ಮಾತ್ರ ಮೆರವಣಿಗೆಯಲ್ಲಿ ಭಾಗವಹಿಸುವರು. ಆದರೆ ಬೈಂದೂರು ಸೇರಿದಂತೆ ಕ್ಷೇತ್ರದ 1944 ಬೂತ್‌ಗಳಲ್ಲಿಯೂ ನಾಮಪತ್ರ ಸಲ್ಲಿಕೆ ಕಾರ್ಯಕ್ರಮವನ್ನು ಭಾರತ ಮಾತೆಗೆ ಪೂಜೆ ಸಲ್ಲಿಸುವ ಮೂಲಕ ಆಚರಿಸುವರು ಎಂದರು.
ಕಿಮ್ಮನೆ ಸುಮ್ಮನಿರಲಿ: ಸಚಿವ ಕಿಮ್ಮನೆ ರತ್ನಾಕರ್ ಅವರು ಅನವಶ್ಯಕವಾಗಿ ರಥಯಾತ್ರೆ ಪ್ರಸ್ತಾಪ ಮಾಡಿದ್ದಾರೆ. ಜನರಿಗೆ ಸೈಟ್ ಇಲ್ಲ, ರಾಮನಿಗೆ ಸೈಟ್ ಕೊಡಿಸಲು ಹೊರಟಿದ್ದಾರೆ ಎಂದು ನಮ್ಮನ್ನು ಟೀಕಿಸಿದ್ದಾರೆ. ಅವರು ಮೊದಲು ಎಷ್ಟು ನಿವೇಶನರಹಿತರಿಗೆ ಸೈಟು ಕೊಟ್ಟಿದ್ದಾರೆ ಎಂದು ಬಹಿರಂಗಪಡಿಸಲಿ ಎಂದು ಆಯನೂರು ಮಂಜುನಾಥ್ ಸವಾಲೆಸೆದರು.
ಸಂಸದ ಬಿ.ವೈ.ರಾಘವೇಂದ್ರ, ಮಾಜಿ ಶಾಸಕ ಕೆ.ಜಿ. ಕುಮಾರಸ್ವಾಮಿ, ದತ್ತಾತ್ರಿ, ಪದ್ಮನಾಭ ಭಟ್, ರುದ್ರೇಗೌಡ, ಎನ್.ಜೆ. ರಾಜಶೇಖರ್, ಡಿ.ಎಸ್. ಅರುಣ್ ಇದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement