ಅಪಾರ ಬೆಂಬಲಿಗರೊಂದಿಗೆ ಬಿಎಸ್ವೈ ನಾಮಪತ್ರ ಸಲ್ಲಿಕೆ
ಚುನಾವಣಾಧಿಕಾರಿ ವಿಪುಲ್ ಬನ್ಸಲ್ಗೆ 4 ಪ್ರತಿ ನಾಮಪತ್ರ ಅರ್ಪಣೆ
ಶಿವಮೊಗ್ಗ: ಭಾರಿ ಜನಸ್ತೋಮದೊಂದಿಗೆ ಮೆರವಣಿಗೆಯಲ್ಲಿ ಆಗಮಿಸಿದ ಬಿಜೆಪಿ ಅಭ್ಯರ್ಥಿ ಬಿ.ಎಸ್. ಯಡಿಯೂರಪ್ಪ ಗುರುವಾರ ಮಧ್ಯಾಹ್ನ 12.30 ಗಂಟೆಗೆ ಜಿಲ್ಲಾ ಚುನಾವಣಾಧಿಕಾರಿ ವಿಪುಲ್ ಬನ್ಸಲ್ ಅವರಿಗೆ ನಾಮಪತ್ರ ಸಲ್ಲಿಸಿದರು.
ಒಟ್ಟು 4 ಪ್ರತಿ ನಾಮಪತ್ರಗಳನ್ನು ಸಲ್ಲಿಸಿದರು. ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ, ರಾಜ್ಯಸಭಾ ಸದಸ್ಯ ಆಯನೂರು ಮಂಜುನಾಥ್, ವಿಧಾನಪರಿಷತ್ ಸದಸ್ಯ ಆರ್.ಕೆ. ಸಿದ್ದರಾಮಣ್ಣ, ಸಂಸದ ಬಿ.ವೈ. ರಾಘವೇಂದ್ರ ಇದ್ದರು.
ಬಿ.ಎಸ್.ವೈ. ನಾಮಪತ್ರ ಸಲ್ಲಿಕೆ ಸಂದರ್ಭ ಜಿಲ್ಲಾಧಿಕಾರಿ ಕಚೇರಿ ಸುತ್ತಮುತ್ತ ಭಾರಿ ಪ್ರಮಾಣದ ಭದ್ರತೆ ನಿಯೋಜಿಸಲಾಗಿತ್ತು. ಅರೆಸೇನಾ ಪಡೆ ಸಿಬ್ಬಂದಿಯನ್ನೂ ನಿಯೋಜಿಸಲಾಗಿತ್ತು. ನಾಮಪತ್ರ ಸಲ್ಲಿಕೆ ನಂತರ ನೆಹರು ಕ್ರೀಡಾಂಗಣದಲ್ಲಿ ಭಾರಿ ಬಹಿರಂಗ ಸಭೆ ಆಯೋಜಿಸಲಾಗಿತ್ತು.